Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 79 ಲಕ್ಷ ರೂ. ಲಾಭ, ಶೇ.13 ಡಿವಿಡೆಂಡ್ ಘೋಷಣೆ
    News

    ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 79 ಲಕ್ಷ ರೂ. ಲಾಭ, ಶೇ.13 ಡಿವಿಡೆಂಡ್ ಘೋಷಣೆ

    adminBy adminJuly 28, 2025

    ಬೈಂದೂರು: ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ 225 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 79,17,693.40 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಹೇಳಿದರು.

    https://chat.whatsapp.com/EbVKVnWB6rlHT1mWtsgbch
    ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಜಿಲ್ಲೆಯಲ್ಲೇ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಬೈಂದೂರಿನಲ್ಲಿ 16 ವರ್ಷಗಳ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆಗಳಲ್ಲಿ ಶಾಖೆಯನ್ನು ತೆರೆಯಲಾಗಿದೆ. ವರ್ಷಾಂತ್ಯಕ್ಕೆ 43 ಕೋಟಿ ರೂಪಾಯಿ ಠೇವಣೆ ಹೊಂದಿದ್ದು ಒಟ್ಟು 225 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು.


    ಸಂಘದ ಉಪಾಧ್ಯಕ್ಷ ಎಂ.ವಿನಾಯಕ ರಾವ್‌, ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ, ರಾಮಕೃಷ್ಣಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಪ್ರಶಾಂತ, ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಅಧೀಕ್ಷಕ ಡಾ.ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ನಾವುಂದ ಶಾಖೆಯ ಪ್ರಬಂಧಕ ಶ್ರೀನಿವಾಸ ಸ್ವಾಗತಿಸಿದರು. ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮ ನಿರೂಪಿಸಿದರು. ಕಂಬದಕೋಣೆ ಶಾಖಾ ವ್ಯವಸ್ಥಾಪಕ ರಾಜೇಂದ್ರ ವಂದಿಸಿದರು. ಸಿಬ್ಬಂದಿ ಸಂತೋಷ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Registrar Golihole Kambadakone Nagooru Navunda S.Raju Poojary Shree Rama Souharda Credit Co Operative Society Byndoor
    Previous Articleಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ., ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧ ಆಯ್ಕೆ
    Next Article ಸಹಕಾರ ಸಂಘಗಳಿಂದ ದೇಶದ ಪ್ರಗತಿಗೆ ಕೊಡುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.