ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್ ಅವರ 145ನೇ ಜನ್ಮದಿನ ಆಚರಣೆ ಕಾರ್ಯಕ್ರಮ ಆಗಸ್ಟ್ 4ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಮಂಗಳೂರು ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಉದಯ ಕುಮಾರ್ ಇರ್ವತ್ತೂರು ಉಪನ್ಯಾಸ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಹೊರತರಲಿರುವ ಕರಾವಳಿ ಸಹಕಾರಿ ಮಾಸಪತ್ರಿಕೆಯನ್ನು ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಭಾಗವಹಿಸಲಿದ್ದಾರೆ.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

