ಕಾರ್ಕಳ: ಸೂರ್ಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಹೆಬ್ರಿ ಇದರ ನೂತನ ಕಾರ್ಕಳ ಶಾಖೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಆಗಸ್ಟ್ 17 ಭಾನುವಾರ ಬೆಳಗ್ಗೆ 10 ಗಂಟೆಗೆ ಫಾರ್ಮನ್ ಲೋಟಸ್ ಕಾಂಪ್ಲೆಕ್ಸ್, ಜೋಡುರಸ್ತೆ ಕಾರ್ಕಳ ಇಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಹೋಟೆಲ್ ಉಷಾದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಸುನೀಲ್ ಕುಮಾರ್ ಉದ್ಘಾಟಿಸುವರು. ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ದೀಪ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್.ಕೆ, ಕರ್ನಾಟಕ ರಾಜ್ಯ ತೂಕ ಮತ್ತು ಅಳತೆಗಾರರ ಪರವಾನಗಿದಾರರ ಸಂಘದ ಉಪಾಧ್ಯಕ್ಷ, ಸೂರ್ಯ ಸ್ಕೇಲ್‌ನ ಸೋಮಶೇಖರ ಬಿ.ವಿ ಭಾಗವಹಿಸಲಿದ್ದಾರೆ.
ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ಮಾಜಿ ವತ್ತಿಪರ ನಿರ್ದೇಶಕ ಬೋಳ ಸದಾಶಿವ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀನ್ ಕೆ.ಅಡ್ಯಂತಾಯ, ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕೆ., ಉದ್ಯಮಿ ಮಹಾವೀರ ಹೆಗ್ಡೆ ಗೌರವ ಉಪಸ್ಥಿತಿ ಇರಲಿದ್ದಾರೆ. ಸೂರ್ಯ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಶ್ರೀಧರ್ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿನಿ ಕುಲಾಲ್, ಸಂಸ್ಥೆಯ ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com










