ಮಂಗಳೂರು: ಸಹಕಾರ ಮಾಣಿಕ್ಯ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಗಸ್ಟ್ 24ರಂದು ಬೆಳಗ್ಗೆ 11ಕ್ಕೆ ಸಂಘದ ಸ್ಥಾಪಕಾಧ್ಯಕ್ಷ ದಿ.ಕೆ.ಬಿ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು 2024-25ನೇ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುವ ಸಂಘದ ಸಿಬ್ಬಂದಿಗಳ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ನಿಟ್ಟೆ ಡೀಮ್ಡ್ ಯೂನಿವರ್ಸಿಟಿಯ ವೈಸ್ ಚಾನ್ಸಲರ್ ಪ್ರೊ.ಡಾ.ಎಂ.ಎಸ್ ಮೂಡಿತ್ತಾಯ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ.ಜೈರಾಜ್ ಬಿ.ರೈ ಅಧ್ಯಕ್ಷತೆ ವಹಿಸುವರು. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಘದ ಉಪಾಧ್ಯಕ್ಷರಾದ ಲಕ್ಷ್ಮೀ ಜಯಪಾಲ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಎ.ರತ್ನಕಾಂತಿ ಶೆಟ್ಟಿ, ಕೆ.ಸೀತಾರಾಮ ರೈ ಸವಣೂರು, ಡಾ.ಕೆ.ಸುಭಾಶ್ಚಂದ್ರ ಶೆಟ್ಟಿ, ಪಿ.ಶಿವರಾಮ ಅಡ್ಯಂತಾಯ, ಸಿಎ ಎಚ್.ಆರ್ ಶೆಟ್ಟಿ, ವಿಠಲ ಪಿ.ಶೆಟ್ಟಿ, ಎಂ.ರಾಮಯ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಪಿ.ಬಿ ದಿವಾಕರ ರೈ, ರವೀಂದ್ರನಾಥ ಜಿ.ಹೆಗ್ಡೆ, ಕುಂಬ್ರ ದಯಾಕರ ಆಳ್ವ, ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಡಾ.ಬಿ.ಸಂಜೀವ ರೈ, ಸಂಸ್ಥೆಯ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ ಮೊದಲಾದವರು ಉಪಸ್ಥಿತರಿರಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com










