ಮಂಗಳೂರು: ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ., ಪಂಪ್‌ವೆಲ್ ಮಂಗಳೂರು ಇವರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಮಂಗಳೂರು, ಮಂಗಳಾದೇವಿ ಮತ್ತು ಜಪ್ಪಿನಮೊಗರು ಗ್ರಾಮ ಯುವಕ ಮಂಡಲ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ ದಿನಾಂಕ ಆಗಸ್ಟ್ 10ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಲಯನ್ಸ್ ಚೈಲ್ಡ್ ಕೇರ್ ಸೆಂಟರ್ ಜಪ್ಪಿನಮೊಗರು ಇಲ್ಲಿ ಆಯೋಜಿಸಲಾಗಿದೆ.
https://chat.whatsapp.com/EbVKVnWB6rlHT1mWtsgbch
ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ , ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಹಲ್ಲುಗಳ ಶುಚಿಗೊಳಿಸುವಿಕೆ , ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಉಚಿತ ಔಷಧ ವಿತರಣೆಯ ಸೇವೆಗಳು ಲಭ್ಯವಿದ್ದು ಮತ್ತು ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು. ಸದಸ್ಯರು ಮತ್ತು ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಲು ಸಂಘದ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com


