ಬೈಂದೂರು: ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಉಪ್ಪುಂದ ಪರಿಚಯ ದೇವಕಿ ಜಿ.ಆರ್ ಸಭಾಂಗಣದಲ್ಲಿ ನಡೆಯಿತು.
https://chat.whatsapp.com/EbVKVnWB6rlHT1mWtsgbch
ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 83.19 ಲಕ್ಷ ರೂ. ವ್ಯವಹಾರ ನಡೆಸಿದ್ದು 26.74 ಲಕ್ಷ ರೂ. ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.10.05 ಡಿವಿಡೆಂಡ್ ಘೋಷಣೆ ಮಾಡಲಾಗಿದೆ. ಜನರಿಗೆ ಉತ್ತಮ ಆರ್ಥಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಆರಂಭಿಸಿದ ಸಂಸ್ಥೆಗೆ ಜನರ ಉತ್ತಮ ಸಹಕಾರದಿಂದ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸಿದೆ. ಇದಕ್ಕೆ ಸಿಬ್ಬಂದಿಗಳ ಪರಿಶ್ರಮ ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ವ್ಯವಹಾರವನ್ನು ಇನ್ನಷ್ಟು ಹೆಚ್ಚಿಸುವುದು ಹಾಗೂ ಶಾಖೆಗಳು ಸ್ವಂತ ಕಟ್ಟಡವನ್ನು ಹೊಂದುವಂತೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಸೊಸೈಟಿಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ ನಾರಂಬಳ್ಳಿ, ದೇವನ್ ಕೆ .ಪೂಜಾರಿ, ಮಾಲತಿ ಪೂಜಾರಿ, ಪಾರ್ವತಿ ಪೂಜಾರಿ, ಮಾಚಯ್ಯ ಬಿಲ್ಲವ, ಗಿರೀಶ್ ಹೊಳ್ಳ, ರಾಮ ಗಾಣಿಗ, ಗೋವಿಂದ ಎನ್.ಪೂಜಾರಿ, ಲಾರೆನ್ಸ್ ಫೆರ್ನಾಂಡೀಸ್, ಮೂಕಾಂಬು ಪೂಜಾರಿ, ಮಂಜುನಾಥ ರಾಮ ನಾಯ್, ಪದ್ಮಾ ಎಚ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ಸಂಸ್ಥೆಯ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಜಯರಾಮ ಶೆಟ್ಟಿ ಬಿಜೂರು ಸ್ವಾಗತಿಸಿದರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್.ಪೂಜಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಬೈಂದೂರು ಶಾಖಾ ವ್ಯವಸ್ಥಾಪಕ ನಾಗರಾಜ್ ಯಡ್ತರೆ ಕಾರ್ಯಕ್ರಮ ನಿರೂಪಿಸಿದರು. ತ್ರಾಸಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಆಚಾರ್ ತಗ್ಗರ್ಸೆ ವಂದಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com










