ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ದಿಢೀರ್ ನಿರ್ಧಾರ?
ಬೆಂಗಳೂರು: ರಾಜ್ಯದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಆದೇಶ ಬಂದ ಹಿನ್ನೆಲೆಯಲ್ಲಿ ರಾಜಣ್ಣ ಈ ನಿರ್ಧಾರ ಮಾಡಿದ್ಧಾರೆ ಎನ್ನಲಾಗಿದೆ.
https://chat.whatsapp.com/EbVKVnWB6rlHT1mWtsgbch
ಕೆಲವು ದಿನಗಳಿಂದ ಪಕ್ಷ, ಹೈಕಮಾಂಡ್ ಹಾಗೂ ರಾಜಕೀಯ ವಿಷಯಗಳಿಂದ ದೂರವಿದ್ದ ಕೆ.ಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ಜತೆಗೆ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಒಳಮುನಿಸು ಇತ್ತು. ಇದು ಕೂಡ ರಾಜೀನಾಮೆ ನೀಡಲು ಕಾರಣ ಎನ್ನಲಾಗುತ್ತಿದೆ. ರಾಜಣ್ಣ ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಿರಿಯ ನಾಯಕ, ಗೃಹಸಚಿವರ ಆಪ್ತರ ವಿರುದ್ಧವೇ ಹೈಕಮಾಂಡ್ ಈ ರೀತಿ ಕ್ರಮ ಕೈಗೊಂಡಿರುವುದು ಆತಂಕ ಮೂಡಿಸಿದೆ.ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ನೀಡುತ್ತಿದ್ದ ಹೇಳಿಕೆಗಳ ಸಂದರ್ಭ ರಾಜಣ್ಣ ಸಿದ್ದರಾಮಯ್ಯ ಪರ ಬಲವಾಗಿಯೇ ಹೇಳಿಕೆ ನೀಡುತಿದ್ದರಲ್ಲದೆ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯಲಿದ್ದಾರೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದರು. ಆದರೆ ಇತ್ತೀಚೆಗೆ ಮತಗಳವು ವಿಷಯದಲ್ಲಿ ರಾಹುಲ್ ಗಾಂಧಿ ಮಾತನಾಡಿದಾಗ ಅದನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. ಮಹದೇವಪುರದಲ್ಲಿ ಚುನಾವಣಾ ಅಕ್ರಮ ನಡೆದಾಗ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು. ನಮ್ಮದೇ ಲೋಪದಿಂದ ಅಕ್ರಮ ನಡೆದಿತ್ತು ಎಂದು ಅವರು ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿತ್ತು. ಈ ವಿಷಯದಿಂದ ಮುಜುಗರಕ್ಕೊಳಗಾಗಿ ಹೈಕಮಾಂಡ್ ರಾಜಣ್ಣ ರಾಜೀನಾಮೆಗೆ ಸೂಚಿಸಿತ್ತು ಎಂದು ಹೇಳಲಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

