ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ.
https://chat.whatsapp.com/EbVKVnWB6rlHT1mWtsgbch
ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಶಸ್ತಿ ನೀಡುತ್ತಿದೆ. ಸಮಾಜಮುಖಿ ಸೇವೆಗಳೊಂದಿಗೆ ಗ್ರಾಹಕರಿಗೆ ಸಂತೃಪ್ತ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ೧೦೦ಯಾಗಿದ್ದು ಇಂತಹ ಸಾಧನೆಯನ್ನು ಬ್ಯಾಂಕ್ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.
23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಅಭಿವೃದ್ಧಿಯ ಪಥದಲ್ಲಿರುವ ಬ್ಯಾಂಕ್ ಅಪೆಕ್ಸ್ ಬ್ಯಾಂಕ್‌ನ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ 23ನೇ ಬಾರಿ ತನ್ನದಾಗಿಸಿಕೊಂಡಿದೆ. ಆ.13ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com










