Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 22ರಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ 24ನೇ ವಾರ್ಷಿಕ ಸಾಮಾನ್ಯ ಸಭೆ
    News

    ಆಗಸ್ಟ್‌ 22ರಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ 24ನೇ ವಾರ್ಷಿಕ ಸಾಮಾನ್ಯ ಸಭೆ

    adminBy adminAugust 19, 2025

    ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.. ಬೆಂಗಳೂರು ಇದರ 24ನೇ ವಾರ್ಷಿಕ ಸಾಮಾನ್ಯ ಸಭೆ ಆಗಸ್ಟ್ 22ರ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ (ಗಾಯತ್ರಿ ಗ್ರಾಂಡ್), ಗೇಟ್ ನಂ.-04ನಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಸಭೆಯ ನೋಟೀಸ್‌, ಅಜೆಂಡಾ ಮತ್ತು ವಿವರ ಟಿಪ್ಪಣಿಗಳೊಂದಿಗೆ ಎಲ್ಲಾ ಅರ್ಹ ಸದಸ್ಯರಿಗೆ ಬಹು ಪ್ರಮಾಣದ ಅಂಚೆ ಮೂಲಕ ಕಳುಹಿಸಲಾಗಿದೆ ಮತ್ತು ಸಂಯುಕ್ತ ಸಹಕಾರಿಗೆ ಸಹಕಾರಿಗಳು ಒದಗಿಸಿರುವ ಸಹಕಾರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾಗಿದೆ. ಸಭೆಯ ಅಜೆಂಡಾ, ಟಿಪ್ಪಣಿಗಳು ಮತ್ತು ಅರ್ಹ ಸದಸ್ಯರ ಪಟ್ಟಿಯು ಸಂಯುಕ್ತ ಸಹಕಾರಿಯ ವೆಬ್‌ ಸೈಟ್ www.souharda.coop ನಲ್ಲಿ ಲಭ್ಯವಿದೆ. ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತಮ್ಮ ಸಹಕಾರಿಯ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯಿಸುವ ಮೂಲಕ ಓರ್ವ ಚುನಾಯಿತ ನಿರ್ದೇಶಕರನ್ನು ಡೆಲಿಗೇಟ್ ಆಗಿ ಭಾಗವಹಿಸಲು ನಿಯೋಜಿಸಬಹುದು. ಅಂತಹ ನಿರ್ದೇಶಕರು ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತನ್ನ ಸಹಕಾರಿಯ ಆಡಳಿತ ಮಂಡಳಿ ಸಭೆಯ ನಿರ್ಣಯ ಹಾಗೂ ಸೂಕ್ತವಾಗಿ ಭರ್ತಿ ಮಾಡಲ್ಪಟ್ಟ ನಮೂನೆಯೊಂದಿಗೆ ಹಾಜರಾಗಬೇಕು. ನಮೂನೆಯು ಸಂಯುಕ್ತ ಸಹಕಾರಿಯ ವೆಬ್‌ ಸೈಟ್ www.souharda.coop ನಲ್ಲಿ ಲಭ್ಯವಿದೆ.
    ಸಭೆಯ ನಂತರ ಸೌಹಾರ್ದ ಸಹಕಾರಿ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಿ 25 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದ ಸಹಕಾರಿಗಳು ಸಂಯುಕ್ತ ಸಹಕಾರಿಯ ನೇತೃತ್ವದಲ್ಲಿ ರಾಜ್ಯಾದಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ರಜತ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ ಜೋಶಿ ಮಧ್ಯಾಹ್ನ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಸಂಯುಕ್ತ ಸಹಕಾರಿಯ ಪ್ರಕಟಣೆ ಪುಸ್ತಕ ಬಿಡುಗಡೆ, ಐದು ಉತ್ತಮ ಸಹಕಾರಿ ಸಂಸ್ಥೆಗಳಿಗೆ ಹಾಗೂ ಶ್ರೇಷ್ಠ ಸಹಕಾರಿ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಭಾಂಗಣದ ಆವರಣದಲ್ಲಿ ತಂತ್ರಜ್ಞಾನ ಮೇಳ, ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಸೌಹಾರ್ದ ಸಹಕಾರಿಗಳ ಉತ್ಪಾದಿತ ವಸ್ತುಗಳ ಮಾರಾಟ ಹಾಗೂ ಪ್ರದರ್ಶಿನಿಗಳ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ಸಂಯುಕ್ತ ಸಹಕಾರಿಯ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಮಳಿಗೆಯನ್ನು ಕಾಯ್ದಿರಿಸಿಕೊಳ್ಳಬಹುದು.
    ಮಧ್ಯಾಹ್ನ ನಡೆಯಲಿರುವ ರಜತ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಕ್ತವಾಗಿ ಭಾಗವಹಿಸಲು ಅವಕಾಶವಿದ್ದು, ಪ್ರತಿಯೊಂದು ಸೌಹಾರ್ದ ಸಹಕಾರಿಯಿಂದ 2ರಿಂದ 3 ಪ್ರತಿನಿಧಿಗಳು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bengaluru Aramane Maidana Karnataka Rajya Samyukta Souharda Sahakari Pradarshini Smarana Sanchike Tantrajnana Mela Varshika Mahasabhe
    Previous Articleಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.63 ಕೋಟಿ ರೂ. ನಿವ್ವಳ ಲಾಭ
    Next Article ನಾಳೆ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.