Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ತಿರಸ್ಕೃತ
    News

    ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ತಿರಸ್ಕೃತ

    adminBy adminAugust 20, 2025

    ವಿಧೇಯಕದ ಪರ 23, ವಿರುದ್ಧ 26 ಮತಗಳು ಚಲಾವಣೆ, ಸರ್ಕಾರಕ್ಕೆ ಮುಜುಗರ

    ಬೆಂಗಳೂರು: ಹಲವಾರು ತಿದ್ದುಪಡಿಗಳೊಂದಿಗೆ ವಿಧಾನಸಭೆಯಲ್ಲಿ ಮಂಗಳವಾರವಷ್ಟೇ ಮಂಡನೆಯಾಗಿದ್ದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ವಿಧಾನ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದೆ. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆ ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಳ್ಳುವ ಮೂಲಕ ರಾಜ್ಯ ಸರ್ಕಾರ ತೀವ್ರ ಮುಜುಗರಕ್ಕೆ ಒಳಗಾಗಿದೆ.

    https://chat.whatsapp.com/EbVKVnWB6rlHT1mWtsgbch
    ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದರೆ, ಪರ 23 ಮತಗಳಷ್ಟೇ ಚಲಾವಣೆಯಾದವು. ಇದರಿಂದ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್​ನಲ್ಲಿ ತಿರಸ್ಕೃತಗೊಂಡಂತಾಗಿದೆ. ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಚಾರವಾಗಿ ಸುದೀರ್ಘ ಚರ್ಚೆಯಾಗಿ ಅಂಗೀಕಾರಗೊಂಡಿತ್ತು. ಬುಧವಾರ ಕಾನೂನು ಸಚಿವ ಎಚ್‌.ಕೆ ಪಾಟೀಲ್​ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿದರು.

    ಈ ಕುರಿತು ಚರ್ಚೆಯಾಗಿ ಪ್ರತಿಪಕ್ಷಗಳು ಈ ವಿಧೇಯಕವನ್ನು ಮತಕ್ಕೆ ಹಾಕುವಂತೆ ಮನವಿ ಮಾಡಿದವು. ಸಭಾಪತಿ ಬಸವರಾಜ ಹೊರಟ್ಟಿಯವರು ವಿಧೇಯಕವನ್ನು ಮತಕ್ಕೆ ಹಾಕಲು ಮುಂದಾದರು. ಮತಕ್ಕೆ ಹಾಕುವ ಮೊದಲೇ ಎದ್ದು ನಿಂತ ಸಚಿವ ಎಚ್‌.​ಕೆ ಪಾಟೀಲ್, ಇದು ಪ್ರತಿಪಕ್ಷಗಳ ಘನತೆಗೆ ತಕ್ಕದ್ದಲ್ಲ. ವಿಧಾನ ಪರಿಷತ್‌ ಇತಿಹಾಸದಲ್ಲಿ ಇದು ಕಪ್ಪುಚುಕ್ಕೆಯಾಗಿ ಉಳಿಯುತ್ತದೆ. ನಾನು ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಟ್ಟ ಮೇಲೂ, ಮತಕ್ಕೆ ಹಾಕುವುದು ಅನವಶ್ಯಕವಾಗಿದೆ. ಈ ವಿಷಯದಲ್ಲಿ ರಾಜಕಾರಣ ತರುವುದು ಒಳ್ಳೆಯದಲ್ಲ ಎಂದು ಹೇಳಿದರು. ಈ ಸಂದರ್ಭ ಸಭಾಪತಿ ಹೊರಟ್ಟಿಯವರು ಮತಕ್ಕೆ ಹಾಕಬೇಕಾ? ಬೇಡವಾ? ಎಂದು ಮತ್ತೊಮ್ಮೆಕೇಳಿದರು. ಪ್ರತಿಪಕ್ಷಗಳು ಮತಕ್ಕೆ ಹಾಕುವಂತೆ ಒಕ್ಕೊರಲನಿಂದ ಹೇಳಿದ ಮೇಲೆ, ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಮತಕ್ಕೆ ಹಾಕಿದರು. ಆಗ ವಿಧೇಯಕದ ಪರವಾಗಿ 23 ಮತಗಳು ಮತ್ತು ವಿರುದ್ಧವಾಗಿ 26 ಮತಗಳು ಬಂದು ವಿಧೇಯಕ ತಿರಸ್ಕೃತಗೊಂಡಿತು.
    ಕಾಂಗ್ರೆಸ್​ನ ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ಸದಸ್ಯತ್ವ ಅವಧಿ ಮುಕ್ತಾಯಗೊಂಡಿದೆ. ಕಾಂಗ್ರೆಸ್​ನಿಂದ ಸಿ.ಪಿ.ಯೋಗೇಶ್ವರ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಕಾರಣದಿಂದ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಬಲ ಕಡಿಮೆಯಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Cooperative Department Cooperative Registrar Karnakata Vidhana Parishat Karnataka Souharda Cooperative (Amendment) Bill Vidheyaka
    Previous Articleಸಹಕಾರ ಸಂಘಗಳಲ್ಲಿ 4,500 ಕೋಟಿ ರೂ. ಠೇವಣಿ ಇರುವುದು ಜನರಿಗೆ ಇರುವ ವಿಶ್ವಾಸಾರ್ಹತೆಗೆ ಸಾಕ್ಷಿ
    Next Article ಸಿಂಚನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ವಾರ್ಷಿಕ ಮಹಾಸಭೆ ಸಂಪನ್ನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.