ಮೂಡುಬಿದಿರೆ: ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಸ್ಥಾಪಿಸಿದ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಮೂಡುಬಿದಿರೆಯ ಜಿವಿಪೈ ಆಸ್ಪತ್ರೆ ಎದುರಿರುವ ವಿಶ್ವಾಸ್ ಪೈನಾಪಲ್ ಸಿಟಿ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಶುಭಾರಂಭಗೊಂಡಿತು.
https://chat.whatsapp.com/EbVKVnWB6rlHT1mWtsgbch
ಬಳಿಕ ಎಂಸಿಎಸ್ ಬ್ಯಾಂಕ್ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿಯವರು, ಕರಿಂಜೆ ಗ್ರಾಮೀಣ ಪ್ರದೇಶದಲ್ಲಿ ಆರು ವರ್ಷಗಳ ಹಿಂದೆ ಸ್ಥಾಪನೆಯಾದ ಸಂಸ್ಥೆಯು ಇಂದು ಪೆರಿಂಜೆಯಲ್ಲಿ ಪ್ರಧಾನ ಕಚೇರಿ, ಕರಿಂಜೆ ಮಠದಲ್ಲಿ ಆಡಳಿತ ಕಚೇರಿ, ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ಪ್ರಥಮ ಶಾಖೆ, ಇದೀಗ ಮೂಡುಬಿದಿರೆಯಲ್ಲಿ ದ್ವಿತೀಯ ಶಾಖೆಯನ್ನು ಪ್ರಾರಂಭಿಸಿದೆ. ಮುಂದೆ ಮಂಗಳೂರು ನಗರದಲ್ಲಿ ಶಾಖೆ ಪ್ರಾರಂಭಿಸಲು ಉದ್ದೇಶಿಸಿದ್ದೇವೆ. ಸಹಕಾರಿ ಹಾಗೂ ಸ್ವಸಹಾಯ ಗುಂಪುಗಳು ಪಾರದರ್ಶಕವಾಗಿ ಮುನ್ನಡೆಯಲು ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಶ್ರಮವೇ ಕಾರಣ. ಗ್ರಾಹಕರು ಕೂಡ ವ್ಯವಸ್ಥೆ ಸದಾ ಬೆಂಗಾವಲಾಗಿರುವುದರಿಂದ ಕಡಿಮೆ ಅವಧಿಯಲ್ಲಿ ಉತ್ತಮ ಸೇವೆ ನೀಡಲು ಸಾಧ್ಯವಾಗಿದೆ ಎಂದರು.







ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿದರು. ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಜಿಲ್ಲಾ ಸಂಯೋಜಕ ನಂದನ್ ಬಿ.ಎಸ್, ಉದ್ಯಮಿ ಕೆ.ಶ್ರೀಪತಿ ಭಟ್, ಕರಿಂಜೆಗುತ್ತು ಕೃಷ್ಣರಾಜ ಹೆಗ್ಡೆ, ಎಂಸಿಎಸ್ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ವಕೀಲ ಮಯೂರಕೀರ್ತಿ ಜೈನ್ ಮುಖ್ಯ ಅತಿಥಿಗಳಾಗಿದ್ದರು.
ಮುಕ್ತಾನಂದ ಸ್ವಾಮೀಜಿಯವರ ಪೂರ್ವಶ್ರಮದ ತಾಯಿ ಕುಸುಮಾ ನಾರಾಯಣ ಕುಂದರ್, ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಪ್ರಕಾಶ್ ಬಿ.ಎನ್. ಮಂಗಳೂರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಲಾ, ಸಂಸ್ಥೆಯ ಸಿಬ್ಬಂದಿಗಳು, ಸಹಕಾರಿಯ ನಿರ್ದೇಶಕರು, ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com





