Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ ನಾಲ್ಕನೇ ಬಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ ಪ್ರದಾನ
    News

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ ನಾಲ್ಕನೇ ಬಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ ಪ್ರದಾನ

    adminBy adminAugust 30, 2025

    ವಿಟ್ಲ: ಪ್ರತಿಷ್ಠಿತ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ ನಾಲ್ಕನೇ ಬಾರಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

    https://chat.whatsapp.com/EbVKVnWB6rlHT1mWtsgbch
    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌, 2024-25 ನೇ ಆರ್ಥಿಕ ವರ್ಷದಲ್ಲಿ ತನ್ನ ಕಾರ್ಯದಕ್ಷತೆ ಮೆರೆದು ದಾಖಲೆಯ ರೂ. 864.42 ಕೋಟಿಗಳ ವ್ಯವಹಾರ ಮಾಡಿದೆ. ರೂ.134.73 ಕೋಟಿ ರೂಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. 104.13 ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇಕಡಾ 93.20ರಷ್ಟಿದ್ದು, ವರದಿ ವರ್ಷದಲ್ಲಿ ರೂ.3.45 ಕೋಟಿ ಲಾಭ ಗಳಿಸಿದೆ. ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ 164.93 ಕೋಟಿಗಳಾಗಿದೆ. ಬ್ಯಾಂಕ್ ಹಲವಾರು ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಹೆಚ್.ಜಗನ್ನಾಥ್ ಸಾಲಿಯಾನ್‌, ಉಪಾಧ್ಯಕ್ಷರಾದ ಮನೋರಂಜನ್‌ ಕೆ.ಆರ್‌ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಇವರಿಗೆ ಶಾಲು ಹೊದಿಸಿ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆಳ್ವ ಕೆ ಮತ್ತು ವಿಶ್ವನಾಥ ಎಂ, ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್ ರಮೇಶ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರೂ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರೂ ಆಗಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಭಾಸ್ಕರ ಕೋಟ್ಯಾನ್‌ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    H. Jagannath Salyan Sadhana Puraskara SCDCC Bank Vasantha P Vitla Grameena Sahakari Bank
    Previous Articleರಾಮಕೃಷ್ಣ ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ
    Next Article ಸುಮಂಗಲಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.