ಬಂಟ್ವಾಳ: ಇಲ್ಲಿನ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಸಂಸ್ಥೆಯು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಂದ 10ನೇ ಬಾರಿ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ವಿತರಿಸಿದರು.
https://chat.whatsapp.com/EbVKVnWB6rlHT1mWtsgbch
ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 10 ಶಾಖೆಗಳನ್ನು ಒಳಗೊಂಡು ಬಿ.ಸಿ.ರೋಡ್ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ಸಂಘವು ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’ ತರಗತಿ ಪಡೆಯುತ್ತಾ ಬಂದಿದೆ. 2024-25ನೇ ಸಾಲಿನಲ್ಲಿ ₹ 930.71 ಕೋಟಿ ವ್ಯವಹಾರ ನಡೆಸಿ ₹2.75 ಕೋಟಿ ನಿವ್ವಳ ಲಾಭ ಗಳಿಸಿದೆ. 2025ರ ಮಾರ್ಚ್ ಅಂತ್ಯಕ್ಕೆ ₹. 122 ಕೋಟಿ ಠೇವಣಿ, ₹ 110 ಕೋಟಿ ಹೊರಬಾಕಿ ಸಾಲದೊಂದಿಗೆ ಎಲ್ಲಾ ಶಾಖೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಸಂಘದ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಹೊಸ ಶಾಖೆಗಳನ್ನು ತೆರೆಯುವ ಯೋಜನೆಗಳನ್ನು ರೂಪಿಸಲಾಗಿದೆ. ಸಂಘದ ಪ್ರಮುಖ ಕನಸಾದ ಪ್ರಧಾನ ಕಛೇರಿಯ ಸ್ವಂತ ಕಟ್ಟಡದ ಯೋಜನೆಗೆ ಈಗಾಗಲೇ ಚಾಲನೆ ದೊರಕಿದೆ.
ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜೀವನ್ ಲೋಯ್ಡ್ ಪಿಂಟೊ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್ ಗ್ರೇಸಿ ಡಿಸೋಜ ಪ್ರಶಸ್ತಿ ಸ್ವೀಕರಿಸಿದರು. ಉಪಾಧ್ಯಕ್ಷರಾದ ವಲೇರಿಯನ್ ಬರೆಟ್ರೊ, ನಿರ್ದೇಶಕರಾದ ಹ್ಯೂಬರ್ಟ್ ಲೋಬೊ, ವಿನ್ಸೆಂಟ್ ಕ್ಲೋಡಿ ಕಾರ್ಲೊ ಹಾಗೂ ಗ್ಲೋರಿಯಾ ಪ್ರೀಮಾ ಕುಟಿನ್ಹೊ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೆ.ಜೈರಾಜ್ ಬಿ.ರೈ, ಭಾಸ್ಕರ ಕೋಟ್ಯಾನ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



