ಮೂಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಗೆ ಶನಿವಾರ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ “ವಿಶಿಷ್ಟ ಸಾಧನಾ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

https://chat.whatsapp.com/EbVKVnWB6rlHT1mWtsgbch
ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತ ಎರಡನೇ ಬಾರಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಗೆ ಪ್ರಶಸ್ತಿ ನೀಡಲಾಯಿತು. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಎರಡನೇ ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಮೂಲ್ಕಿ ತಾಲೂಕಿನಲ್ಲಿ ಈ ಪ್ರಶಸ್ತಿ ಪಡೆದ ಪ್ರಥಮ ಸೊಸೈಟಿಯಾಗಿ ಮೂಡಿಬಂದಿದೆ. ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಉಮಾನಾಥ್ ಜೆ. ಶೆಟ್ಟಿಗಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಬೆಳಪು ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ, ಸದಾಶಿವ ಉಳ್ಳಾಲ್, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



