Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಧ್ಯಾಪಕರ ಸಹಕಾರಿ ಸಂಘದ ವಿಶಿಷ್ಟ ಸಾಧನೆಗೆ ನಾಲ್ಕನೇ ಬಾರಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ
    News

    ಅಧ್ಯಾಪಕರ ಸಹಕಾರಿ ಸಂಘದ ವಿಶಿಷ್ಟ ಸಾಧನೆಗೆ ನಾಲ್ಕನೇ ಬಾರಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ

    adminBy adminAugust 30, 2025

    ವಿಟ್ಲ : ಅಧ್ಯಾಪಕರ ಸಹಕಾರಿ ಸಂಘ ನಿ. ವಿಟ್ಲ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 4ನೇ ಬಾರಿ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದೆ.

    https://chat.whatsapp.com/EbVKVnWB6rlHT1mWtsgbch

    ಒಟ್ಟು 9 ಶಾಖೆಗಳನ್ನು ಹೊಂದಿರುವ ಅಧ್ಯಾಪಕರ ಸಹಕಾರಿ ಸಂಘವು ವಿಟ್ಲ, ಬಿ.ಸಿ.ರೋಡ್, ಪುತ್ತೂರು, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಮೂಲ್ಕಿ, ಕಡಬ ಹಾಗೂ ಮಂಗಳೂರು ಇಲ್ಲಿ ಬ್ರಾಂಚ್ ಗಳನ್ನು ಹೊಂದಿದೆ.
    ಸಂಘವು 2024-25ನೇ ಸಾಲಿನ ಆಡಿಟ್ ವರ್ಗಿಕರಣದಲ್ಲಿ “ಎ” ತರಗತಿ ಪಡೆದುಕೊಂಡು ಬರುತ್ತಿದ್ದು, ಸಂಘವು 2024-25ನೇ ಸಾಲಿನಲ್ಲಿ 660.58 ಕೋಟಿ ವ್ಯವಹಾರ ಮಾಡಿ, ರೂ.2.09 ಕೋಟಿ ನಿವ್ವಳ ಲಾಭ ಗಳಿಸಿದೆ. ಮಾರ್ಚ್ 2025ರ ಅಂತ್ಯಕ್ಕೆ ಒಟ್ಟು 4906 ಎ ತರಗತಿ ಸದಸ್ಯರನ್ನು ಹೊಂದಿದ್ದು, ರೂ.5.57 ಕೋಟಿ ಪಾಲು ಬಂಡವಾಳ, ರೂ.209.69 ಕೋಟಿ ಠೇವಣಿ ಹಾಗೂ ರೂ.192.39 ಕೋಟಿ ಹೊರ ಬಾಕಿ ಸಾಲವನ್ನು ಹೊಂದಿದೆ. ಮಾತ್ರವಲ್ಲದೇ ಸಂಘವು ಹಲವಾರು ವರ್ಷಗಳಿಂದ ಶೇಕಡಾ 15ಕ್ಕಿಂತ ಮೇಲಿನ ಡಿವಿಡೆಂಡನ್ನು ಸದಸ್ಯರಿಗೆ ನೀಡುತ್ತಾ ಬಂದಿದೆ. ಪ್ರಸ್ತುತ ಸಂಘದಲ್ಲಿ 11 ಕೋಟಿಯಷ್ಟು ವಿವಿಧ ರೀತಿಯ ನಿಧಿಗಳಿರುತ್ತದೆ. ಸಂಘವು ತನ್ನ ಸದಸ್ಯರಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಎಲ್ಲಾ ಶಿಕ್ಷಕರನ್ನು ಮಹಾಸಭೆಯ ದಿನದಂದು ಗೌರವಿಸಲಾಗುವುದು. ಸಂಘವು ತನ್ನ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ವರ್ಷಗಳಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ಗಣ್ಯರ ಉಪಸ್ಥಿತಿಯಲ್ಲಿ ಮಹಾಸಭೆಯ ದಿನದಂದು ವಿದ್ಯಾರ್ಥಿಗಳಿಗೆ ವಿತರಿಸುತ್ತದೆ.

    ಸಂಘದ ಆಡಳಿತ ಮಂಡಳಿಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿ ರಮೆಶ್ ನಾಯಕ್ ಕೆ., ಉಪಾಧ್ಯಕ್ಷರಾಗಿ ನವೀನ್ ಪಿ.ಎಸ್., ನಿರ್ದೇಶಕರಾಗಿ ರಾಜೇಂದ್ರ ರೈ ಪಿ, ಡಾ.ನವೀನ್ ಕೊಣಾಜೆ, ಪುಷ್ಪರಾಜ್ ಬಿ., ಅನಿತಾ ಮೆನೆಜಸ್, ಭಾರತಿ, ಉಮಾನಾಥ ರೈ ಎಮ್., ಶಿವಕುಮಾರ್ ಎಮ್.ಜಿ., ನಾಗೇಶ್ ಪಾಟಾಳಿ ಕೆ, ಸಂದೇಶ್ ಎಮ್.ಎಸ್., ರಘು, ರವಿ ನಾಯ್ಕ ಐ, ಲಕ್ಷ್ಮೀಕಾಂತ್ ಬೇಕಲ್ ಎಸ್., ಶ್ರೀಧರ ಎನ್., ಶೀನಪ್ಪ ಎನ್., ಅಖಿಲ್ ಶೆಟ್ಟಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಎಲ್ಲಾ ಸದಸ್ಯರು, ಆಡಳಿತ ಮಂಡಳಿ, ಜನರಲ್ ಮ್ಯಾನೇಜರ್, ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸಂಘದ ಉತ್ತಮ ಬೆಳವಣಿಗೆಗೆ ಕಾರಣವಾಯಿತು.

    ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಈ ಪ್ರಶಸ್ತಿಯು ಸಂಘದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಂಘಕ್ಕೆ ಪ್ರಶಸ್ತಿ ಲಭಿಸಿರುವುದು ಬಹಳ ಸಂತಸ ತಂದಿದೆ. ಸರ್ವ ಸದಸ್ಯರ ಸಲಹೆ ಸಹಕಾರದಿಂದ ಲಭಿಸಿರುವ ಈ ಪ್ರಶಸ್ತಿ ಸಂಘದ ಅಭಿವೃದ್ಧಿಗಾಗಿ ಇನ್ನಷ್ಟು ಶ್ರಮಿಸಲು ಸ್ಪೂರ್ತಿಯಾಗಿದೆ.ಸಂಘದ ಸಾಧನೆಗೆ ಮತ್ತು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ನಿರ್ದೇಶಕರಿಗೆ, ಸದಸ್ಯರಿಗೆ, ಠೇವಣಿದಾರರಿಗೆ, ಗ್ರಾಹಕರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಸಂಘದ ಅಧ್ಯಕ್ಷ ಕೆ.ರಮೇಶ್ ನಾಯಕ್ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.ಕಾಮ್

    Dr. M.N Rajendrakumar ramesh nayak Sadhana Puraskara SCDCC Bank Teachers Co Operative Society vitla
    Previous Articleಸಮಾಜ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.