Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

    adminBy adminAugust 30, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2024-25ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಶನಿವಾರ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

    https://chat.whatsapp.com/EbVKVnWB6rlHT1mWtsgbch

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ಮಂಗಳೂರಿನ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2024-25ನೇ ಸಾಲಿನಲ್ಲಿ ದುಡಿಯುವ ಬಂಡವಾಳ ರೂ. 25,749.48 ಲಕ್ಷ ಹೊಂದಿದ್ದು, ರೂ.3.06 ಕೋಟಿಗೂ ಮಿಕ್ಕಿ ಲಾಭ ಗಳಿಸಿದೆ.


    ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್, ಟಿ.ಜಿ. ರಾಜಾರಾಮ ಭಟ್, ಎಂ. ವಾದಿರಾಜ್ ಶೆಟ್ಟಿ, ಎಸ್.ಬಿ. ಜಯರಾಮ ರೈ, ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ, ಅಪೆಕ್ಸ್ ಬ್ಯಾಂಕ್ ನ ಪ್ರತಿನಿಧಿ ಸದಾಶಿವ ಉಳ್ಳಾಲ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ರಾವ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್, ರಮೇಶ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರ) ಗೋಪಾಲಕೃಷ್ಣ ಭಟ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರುಗಳಾದ ಪರಮೇಶ್ವರ ಜಿ.ಪೂಜಾರಿ, ಆನಂದ ಎಸ್. ಕೊಂಡಾಣ ಮತ್ತಿತರರು ಉಪಸ್ಥಿತರಿದ್ದರು.
    ಅಖಿಲ ಭಾರತ  ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಸತತ ಏಳು ಬಾರಿ `ಉತ್ತಮ ಸಹಕಾರಿ ಸಂಘ’ ರಾಜ್ಯ ಪ್ರಶಸ್ತಿ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 10 ವರ್ಷಗಳಿಂದ ಇ-ಸ್ಟ್ಯಾಂಪಿಂಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ, ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 10 ವರ್ಷಗಳಿಂದ “ವಿಮಾ ಪ್ರಶಸ್ತಿ”, 2019ನೇ ಸಾಲಿನ “ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, ಯುವವಾಹಿನಿ ಕೇಂದ್ರ ಸಮಿತಿಯಿಂದ “ಯುವವಾಹಿನಿ ಸಾಧನಶ್ರೇಷ್ಠ” ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಫೌಂಡೇಶನ್ ನಿಂದ “ಅವಾರ್ಡ್ ಪೋರ್ ಎಕ್ಸ್ ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ” ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 10 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ ಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಎಂದರೆ ಶೇ.100ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಶೇ.98ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಆತ್ಮಶಕ್ತಿ ಸಹಕಾರಿ ಸಂಘವು ಸುಮಾರು 87ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 650ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತ್ರಚಿಕಿತ್ಸಾ ವೆಚ್ಚ ಹಾಗೂ 19,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸಿದೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 11 ವರ್ಷದಿಂದ ಆಯೋಜಿಸಿ ಸುಮಾರು 800 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

     

    Atmashakthi Atmashakthi Vividhoddesha Sahakari Sangha Chitharanjan Bolar Cooperative Cooperative Department SCDCC Bank
    Previous Articleಅಧ್ಯಾಪಕರ ಸಹಕಾರಿ ಸಂಘದ ವಿಶಿಷ್ಟ ಸಾಧನೆಗೆ ನಾಲ್ಕನೇ ಬಾರಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ
    Next Article ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಾಧನಾ ಪುರಸ್ಕಾರ ಪ್ರಧಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.