Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 110.41 ಕೋಟಿ ರೂ. ಲಾಭ
    News

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 110.41 ಕೋಟಿ ರೂ. ಲಾಭ

    adminBy adminAugust 30, 2025
    Oplus_131072

    10% ಡಿವಿಡೆಂಡ್, ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ

    ಮಂಗಳೂರು: ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ 110.41 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯ ಸಂಘಗಳಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ತಿಳಿಸಿದರು.
    ಶನಿವಾರ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 111ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    https://chat.whatsapp.com/EbVKVnWB6rlHT1mWtsgbch

    ವರದಿ ವರ್ಷದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಹೊಸತನದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‌ನೆಟ್, ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ 113 ಶಾಖೆಗಳಲ್ಲಿ ದೊರೆಯುತ್ತಿದೆ. ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್‌ನಂತಹ ವಿನೂತನ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಹಾಗೂ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಸೇವೆಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ. ವರದಿ ವರ್ಷದಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಬ್ಯಾಂಕ್ ಹಮ್ಮಿಕೊಂಡಿದೆ ಎಂದು ತಿಳಿಸಿದರು.

    ಗುರಿ ಮೀರಿದ ಸಾಧನೆ:
    ಎಸ್ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಒಟ್ಟು 17366.68 ಕೋಟಿ ರೂ. ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆ ಮಾಡಿದೆ. ಒಟ್ಟು 7882.76 ಕೋಟಿ ರೂ. ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ. ಸೇವಾ ಬದ್ಧತೆ ಮೆರೆದು 7775.44 ಕೋಟಿ ರೂ.ಮುಂಗಡ ನೀಡಿದೆ.

    ರಾಷ್ಟ್ರೀಯ ದಾಖಲೆ: ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇ.100 ಮರು ಪಾವತಿಯಾಗಿದೆ. ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಅವಿಭಜಿತ ದ.ಕ.ಜಿಲ್ಲೆಯಲ್ಲಿ ಈ ಬಾರಿ 17 ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಸಾಲ ವಸೂಲಾತಿಯಲ್ಲಿ ಶೇ.ನೂರರ ಸಾಧನೆ ಮಾಡಿದೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

    ಅಪೆಕ್ಸ್/ನಬಾರ್ಡ್ ಪ್ರಶಸ್ತಿ:
    ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೇಶದ ಗಮನ ಸೆಳೆದಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸರ್ವಾಂಗೀಣ ನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ 23 ಬಾರಿ ದೊರೆತಿರುವುದು ಬ್ಯಾಂಕ್‌ನ ಕಾರ್ಯಸಾಧನೆಗೆ ಸಂದ ಗೌರವವಾಗಿದೆ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ ನಬಾರ್ಡ್ ಪ್ರಶಸ್ತಿ 19 ಬಾರಿ ಬ್ಯಾಂಕಿಗೆ ದೊರೆತಿದೆ. ವರದಿ ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಬ್ಯಾಂಕಿಗೆ ಎಪಿವೈ ರಾಷ್ಟ್ರೀಯ ಪ್ರಶಸ್ತಿ ನಾಲ್ಕನೇ ಬಾರಿ ಬಂದಿದೆ ಎಂದು ಡಾ.ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದರು.

    ಪ್ರಶಸ್ತಿ ಪುರಸ್ಕಾರ:
    2024-25ನೇ ಸಾಲಿನಲ್ಲಿ ಶೇ.100ರ ವಸೂಲಾತಿಯಲ್ಲಿ ಸಾಧನೆ ಮಾಡಿದ 17 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಾರ್ಪಣೆ ಮಾಡಲಾಯಿತು. ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗದ 4 ಮತ್ತು ಬಿ ವರ್ಗದ 3 ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ 2024-25ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ಶಾಸಕ ಯಶ್‌ಪಾಲ್ ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ್ ಎಸ್.ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್.ಎನ್. ಮನ್ಮಥ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್. ಎನ್.ರಮೇಶ್, ಲಾವಣ್ಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Annual General Body Meeting Apex Bank Award Banking Cooperative Cooperative Department Cooperative Registrar Dr. M.N Rajendrakumar SCDDC Bank
    Previous Articleಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಾಧನಾ ಪುರಸ್ಕಾರ ಪ್ರಧಾನ
    Next Article ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.