ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿಯಮಿತ ಮಂಗಳೂರು ಇದರ 2024 -25ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಭಾಸ್ಕರ್ ಎಸ್.ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜರಗಿತು.
https://chat.whatsapp.com/EbVKVnWB6rlHT1mWtsgbch
ಸಂಘದಲ್ಲಿ ಒಟ್ಟು 15,245 ಸದಸ್ಯರಿದ್ದು, 2024-25ನೇ ಸಾಲಿನಲ್ಲಿ 550 ಕೋಟಿಗೂ ಮಿಕ್ಕಿ ವಾರ್ಷಿಕ ವಹಿವಾಟು ನಡೆಸಿದೆ. ಸಂಘದಲ್ಲಿ ಒಟ್ಟು ರೂ. 8472.40 ಲಕ್ಷ ಠೇವಣಿ ಇದ್ದು ಹೊರಬಾಕಿ ಸಾಲ ರೂ. 8449.93 ಲಕ್ಷ ಇದೆ. 2024- 25ನೇ ಸಾಲಿಗೆ ರೂ. 103.09 ಲಕ್ಷ ಲಾಭ ಗಳಿಸಿದ್ದು ಶೇಕಡ 9 ಡಿವಿಡೆಂಡ್ ಘೋಷಿಸಿದೆ. ಸಂಘವು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಶಾಖೆಗಳನ್ನು ತೆರೆಯಲು ಉದ್ದೇಶಿಸಿದೆ. ಸಂಘದ ಸ್ಥಾಪಕ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ದಿವಾಕರ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




