Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ 1.03 ಕೋಟಿ ರೂ. ಲಾಭ
    News

    ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘಕ್ಕೆ 1.03 ಕೋಟಿ ರೂ. ಲಾಭ

    adminBy adminSeptember 3, 2025

    ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಎನ್‌.ಮುತ್ತಪ್ಪ ಪೂಜಾರಿಯವರಿಂದ ಶೇ.25 ಡಿವಿಡೆಂಡ್ ಘೋಷಣೆ

    ಪುತ್ತೂರು: ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆಲಂಕಾರಿನಲ್ಲಿರುವ ಸಂಘದ ಪ್ರಧಾನ ಕಚೇರಿಯ ಬೈದಶ್ರೀ ಸಭಾಭವನದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷಎನ್.ಮುತ್ತಪ್ಪ ಪೂಜಾರಿ ಮಾತನಾಡಿ, 2024-25ನೇ ಸಾಲಿನಲ್ಲಿ ಸಂಘವು 250.16 ಕೋಟಿ ರೂ. ವ್ಯವಹಾರ ನಡೆಸಿ ರೂ 1.03 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.25ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು. 1991ರಲ್ಲಿ ಸಂಘ ಪ್ರಾರಂಭಗೊಂಡು 2005ರಿಂದ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ. ಪ್ರಾರಂಭದಲ್ಲಿ ರೂ. 2.30 ಲಕ್ಷ ಮೂಲ ಬಂಡವಾಳದೊಂದಿಗೆ ವ್ಯವಹಾರ ಆರಂಭಿಸಿದ ಸಂಘವು 2024-25ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 1408 ಎ ತರಗತಿ ಸದಸ್ಯರನ್ನು ಹೊಂದಿದ್ದು, ರೂ.37 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಆಲಂಕಾರಿನಲ್ಲಿ ಸ್ವಂತ ನಿವೇಶನದಲ್ಲಿರುವ ಬೈದಶ್ರೀ ಸಹಕಾರ ಸೌಧದಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಕಡಬ, ನೂಜಿಬಾಳ್ತಿಲ-ಕಲ್ಲುಗುಡ್ಡೆ, ನೆಟ್ಟಣ ಮತ್ತು ಕೊಯಿಲದಲ್ಲಿ ಬ್ಯಾಂಕಿಂಗ್ ವ್ಯವಹಾರದ ಶಾಖೆಗಳಿವೆ. 2024-25ನೇ ಸಾಲಿನಲ್ಲಿ ಶೇ.98.14 ಸಾಲ ವಸೂಲಾತಿಯಾಗಿದ್ದು ಲೆಕ್ಕಪರಿಶೋಧನೆಯಲ್ಲಿ ‘ಎ’ ವರ್ಗೀಕರಣ ಪಡೆದುಕೊಂಡಿದೆ. ವ್ಯವಹಾರದಲ್ಲಿ ಸತತ ಮೂರು ವರ್ಷಗಳಿಂದ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಮಾಹಿತಿ ನೀಡಿದರು.

    ಶೀಘ್ರದಲ್ಲಿ ಬೆಳ್ಳಾರೆ ಶಾಖೆ ಆರಂಭ
    ಸಂಘದ ಕಾರ್ಯವ್ಯಾಪ್ತಿಯನ್ನು ಜಿಲ್ಲಾಮಟ್ಟಕ್ಕೆ ವಿಸ್ತರಿಸಿ ಬೈಲಾ ತಿದ್ದುಪಡಿ ಮಾಡಿಕೊಂಡು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಬೆಳ್ಳಾರೆಯಲ್ಲಿ ಹೊಸ ಶಾಖೆ ಆರಂಭಿಸಲಾಗುವುದು. ಇದಕ್ಕೆ ಬೇಕಾದ ಸಿದ್ದತೆಯೂ ಮಾಡಿಕೊಳ್ಳಲಾಗಿದೆ. ಮುಂದೆ ನಿಂತಿಕಲ್ಲುನಲ್ಲೂ ನೂತನ ಶಾಖೆ ತೆರೆಯಲಾಗುವುದು ಎಂದು ಮುತ್ತಪ್ಪ ಪೂಜಾರಿ ಹೇಳಿದರು. ಮುಂದಿನ ದಿನಗಳಲ್ಲಿ ಅಡಕೆ ಬೆಳೆಗಾರ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಔಷಧ ಸಿಂಪಡಿಸುವ ಫೈಬರ್ ದೋಟಿ ಖರೀದಿಸಲು ಸಾಲ ನೀಡುವ ಯೋಜನೆ ರೂಪಿಸಲಾಗಿದೆ. ಸದಸ್ಯರ ಬೇಡಿಕೆಯಂತೆ ಸ್ಥಳೀಯ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆರೋಗ್ಯ ಶಿಬಿರವೂ ಆಯೋಜಿಸಲಾಗುವುದು. ಸದಸ್ಯರ ಸಹಕಾರದಿಂದ ಸಂಘವು ಚೈತನ್ಯ ರೂಪದಲ್ಲಿ ಅಭಿವೃದ್ಧಿಯಾಗುತ್ತಿದೆ ಎಂದರು.

    ಅತ್ಯುತ್ತಮ ಶಾಖೆಗೆ ಗೌರವಾರ್ಪಣೆ
    2024-25ನೇ ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಸಾಧನೆ ಮಾಡಿದ ನೆಟ್ಟಣ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಸಂತೋಷ್‌ ಕುಮಾ‌ರ್ ಬಿಳಿನೆಲೆ ಹಾಗೂ ಶಾಖಾ ವ್ಯವಸ್ಥಾಪಕ ಮಿಥುನ್ ಸುಂದರ್ ಮತ್ತು ನೂಜಿಬಾಳ್ತಿಲ-ಕಲ್ಲುಗುಡ್ಡೆ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಕುಸುಮಾಧರ ಎನ್ನಾಜೆ ಹಾಗೂ ಶಾಖಾ ವ್ಯವಸ್ಥಾಪಕಿ ಶರ್ಮಿಳಾ ಎನ್. ಅವರನ್ನು ಗೌರವಿಸಲಾಯಿತು. ಸಂಘದ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಎಸ್‌ಎಸ್ಎಲ್‌ಸಿಯಲ್ಲಿ ಅಧಿಕ ಅಂಕ ಪಡೆದುಕೊಂಡ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಪೂರ್ಣೇಶ್, ಕಡಬ ಕ್ಲಾನಾಯ ಜ್ಯೋತಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಗ್ರೀಷ್ಮಾ ಪಿ., ಪಿಯುಸಿ ಕಲಾ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಕಾವ್ಯಶ್ರೀ, ನೂಜಿಬಾಳ್ತಿಲ ಬೆಥನಿ ಪದವಿಪೂರ್ವ ಕಾಲೇಜಿನ ನಿಶ್ಚಿತಾ, ರಕ್ಷಿತಾ, ಆತೂರು ಆಯಿಷಾ ಪದವಿಪೂರ್ವ ಕಾಲೇಜಿನ ಮೈಮುನಾ ಲವೀಝಾ, ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಶ್ರೇಯಸ್, ಕಡಬ ಸೈಂಟ್ ಜೋಕಿಮ್ಸ್ ಪದವಿಪೂರ್ವ ಕಾಲೇಜಿನ ಶಬರೀಶ ಅವರನ್ನು ಗೌರವಿಸಲಾಯಿತು. ಮೂರ್ತೆದಾರ ಸದಸ್ಯರಿಗೆ ಪ್ರೋತ್ಸಾಹಧನ, ಕಡ್ಡಾಯ ಠೇವಣಿ ವಿತರಣೆ ಮಾಡಲಾಯಿತು.

    1.05 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ
    ಸಂಘದ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 54 ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಗಳಿಗೆ ಒಟ್ಟು 1.05 ಲಕ್ಷ ರೂ. ವಿದ್ಯಾರ್ಥಿವೇತನ ಮಹಾಸಭೆಯಲ್ಲಿ ವಿತರಣೆ ಮಾಡಲಾಯಿತು. ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ, ಸಂಘದ ಮೂರ್ತೆದಾರರ ಮಕ್ಕಳಿಗೆ, ಸರಕಾರಿ ಶಾಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು. ಅಲ್ಲದೇ ದತ್ತಿನಿಧಿ ವಿದ್ಯಾರ್ಥಿ ವೇತನ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಲಾಯಿತು.

    ಸಂಘದ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಕರ್ಕೇರ ಮತ್ರಾಡಿ, ಮಾಜಿ ನಿರ್ದೇಶಕರಾದ ಬಿ.ಕೆ.ಸುಂದರ ಆಲಂಕಾರು, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಸಂಜೀವ ಪೂಜಾರಿ ಬಟ್ಟಡ್ಕ, ಜಿನ್ನಪ್ಪಸಾಲಿಯಾನ್ ಕಡಬ, ವಸಂತ ಪೂಜಾರಿ ಬದಿಬಾಗಿಲು, ಜನಾರ್ದನ ಬಿ.ಎಲ್., ಪಿ.ಶ್ರೀಧರ ಪೂಜಾರಿ ತುಂಬೆತ್ತಡ್ಕ, ತಿಮ್ಮಪ್ಪ ಪೂಜಾರಿ ಕಿನ್ನಿಗೋಳಿ, ಭಾಸ್ಕರ ಬರೆಂಬೆಟ್ಟು, ಸಂಘದ ಸದಸ್ಯರಾದ ಉದಯ ಸಾಲ್ಯಾನ್, ಮಾಧವ ಪೂಜಾರಿ, ಸುಚೇತಾ ಬರೆಂಬೆಟ್ಟು, ರವಿ ಕುಂಙಲಡ್ಡ, ಪುರುಷೋತ್ತಮ ಪೂಜಾರಿ ಬರೆಂಬೆಟ್ಟು, ಅಶೋಕ್ ಕೊಯಿಲ, ಮೋನಪ್ಪ ಪೂಜಾರಿ ಕರ್ಮಾಯಿ, ಸುಂದರ ಕರ್ಕೇರ ಮತ್ರಾಡಿ, ಸಂಜೀವ ಪೂಜಾರಿ ನೈಲ, ಸುಧಾಕರ ಪೂಜಾರಿ ಕಲ್ಲೇರಿ ಶಾಖಾ ಸಲಹಾ ಸಮಿತಿ ಸದಸ್ಯರು, ಸಂಘದ ಸದಸ್ಯರು ಉಪಸ್ಥಿತರಿದ್ದರಿದ್ದರು. ನಿರ್ದೇಶಕರಾದ ಕೆ.ಜಯಕರ ಪೂಜಾರಿ ಕಲ್ಲೇರಿ, ಸಂತೋಷ್ ಕುಮಾರ್ ಮತ್ತಾಡಿ, ಗಂಗಾರತ್ನ ವಸಂತ್ ಅಗತ್ತಾಡಿ, ಜಯಂತ ಪೂಜಾರಿ ನೆಕ್ಕಿಲಾಡಿ, ಆನಂದ ಪೂಜಾರಿ ಮಠದಬೈಲು, ಲಕ್ಷ್ಮೀಶ ಬಂಗೇರ ಪೆಲತ್ತೋಡಿ, ವಿಜಯ ಅಂಬಾ, ವಾಸಪ್ಪ ಪೂಜಾರಿ ಕೇಪುಳು ವೇದಿಕೆಯಲ್ಲಿದ್ದರು. ಉಪಾಧ್ಯಕ್ಷ ಜನಾರ್ದನ ಪೂಜಾರಿ ಕದ್ರ ವಂದಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಲಿಂಗಪ್ಪ ಪೂಜಾರಿ ವಾರ್ಷಿಕ ವರದಿ ವಾಚಿಸಿದರು. ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಕುಮಾರ್ ಅಗಲ್ತಾಡಿ, ಶಾಖಾ ವ್ಯವಸ್ಥಾಪಕ ಮಿಥುನ್ ಸುಂದರ್, ಕಿರಿಯ ಗುಮಾಸ್ತ ಗೀತೇಶ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ಸ್ವಾತಿ, ಚೈತನ್ಯ ಪ್ರಾರ್ಥಿಸಿದರು. ಶಾಖಾ ವ್ಯವಸ್ಥಾಪಕರಾದ ರಂಜಿನಿ ಆರ್., ರಕ್ಷಿತ್ ಎ., ಶಿಲ್ಪಾ ಕೆ.ಎಸ್., ಸಿಬ್ಬಂದಿಗಳಾದ ಶರ್ಮಿಳಾ, ಸಚಿನ್ ಎಸ್.ಸಿ.. ಕೀರ್ತನ್‌ಕುಮಾರ್ ಎ., ದೀಕ್ಷಿತ್ ಕೆ., ಅನಿಲ್‌ಕುಮಾರ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಪಿಗ್ಮಿ ಸಂಗ್ರಾಹಕರಾದ ಎಸ್.ರಾಮಚಂದ್ರ ನೈಯ್ಯಲ್ಗ, ಎನ್.ಧನಂಜಯ ನೈಯ್ಯಲ್ಗ, ಶರತ್ ಕುಮಾರ್ ಬಿ.ಎಸ್., ಶಶಿಧರ ಆರ್.ಕೆ., ಅಜಯ್‌ ಕುಮಾರ್ ಕೆ.ಆರ್., ರೋಹಿಣಿ ಎಸ್.ವಾಲ್ತಾಜೆ, ಚರಣ್ ವಿ.ಬಿ., ವಿನೀತಾ ಒ.ಡಿ., ಕೌಶಿಕ್ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Alankaru Murtedarara Seva Sahakara Sangha Co Operative ministry Cooperative Cooperative Department Muttappa Poojary
    Previous Articleಸೆ.21ರಂದು ಅನನ್ಯ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    Next Article ಸೆಪ್ಟೆಂಬರ್‌ 8ರಂದು ಸಹಕಾರಿಗಳಿಂದ ಧರ್ಮಜಾಗೃತಿ ಯಾತ್ರೆಯ ಪೂರ್ವಭಾವಿ ಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.