ಮಂಗಳೂರು: ದೇಶದ ಪವಿತ್ರ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಹಲವು ರೀತಿಯ ಅಪಪ್ರಚಾರಗಳ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಲಾಗುವ ‘ಧರ್ಮಜಾಗೃತಿ ಯಾತ್ರೆ’ಯ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಈ ಪೂರ್ವಭಾವಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮನವಿ ಮಾಡಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com










