ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಪ್ರಾಬಲ್ಯ ಮುಂದುವರಿಕೆ
ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದು, ತನ್ಮೂಲಕ ಏಳನೇ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಈ ಚುನಾವಣೆಯ ಫಲಿತಾಂಶವು ರಾಜಣ್ಣ ಅವರು, ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಪ್ರಾಬಲ್ಯವನ್ನು ದೃಢಪಡಿಸಿದೆ.
https://chat.whatsapp.com/EbVKVnWB6rlHT1mWtsgbch
ಗುರುವಾರ ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರ ಆಡಳಿತ ಮಂಡಳಿಯು ಕೆ.ಎನ್ ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಬ್ಯಾಂಕ್‌ನ ಮುಂಭಾಗದಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದರು. ಅಧ್ಯಕ್ಷ ಹುದ್ದೆಗೆ ರಾಜಣ್ಣ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆ ಅವಿರೋಧವಾಗಿ ನಡೆಯಿತು.
ಕೆ.ಎನ್.ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದ ಪ್ರಭಾವವನ್ನು ಹೊಂದಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ರಾಜಣ್ಣ ಅವರ ಪ್ರಾಬಲ್ಯ ಮುಂದುವರಿದಿದ್ದು ಏಳನೇ ಬಾರಿ ತುಮಕೂರು ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ಅವರ ಸಾಮರ್ಥ್ಯ ಮತ್ತು ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಕೆ.ಎನ್ ರಾಜಣ್ಣ ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್‌ನ ಕ್ಯಾತಸಂದ್ರ ತಾಲೂಕು ಘಟಕದ ಕಾರ್ಯದರ್ಶಿಯಾಗಿ 1972ರಲ್ಲಿ ಆರಂಭಿಸಿದ್ದರು. 1998ರಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆಯಾದ ಅವರು, 2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಜನತಾ ದಳ (ಸೆಕ್ಯುಲರ್)ಗೆ ಸೇರಿ, ಬೆಳ್ಳಾವಿ ಕ್ಷೇತ್ರದಿಂದ ಗೆದ್ದಿದ್ದರು. 2013 ಮತ್ತು 2023ರಲ್ಲಿ ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಆಯ್ಕೆಯಾದರು. 2023ರಲ್ಲಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದು ಕಳೆದ ತಿಂಗಳಷ್ಟೇ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.
ಕೆ.ಎನ್ ರಾಜಣ್ಣ ಅವರು ಏಳನೇ ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಸುದ್ದಿಯಿಂದ ಸಂತಸರಾಗಿರುವ ಅವರ ಅಭಿಮಾನಿಗಳು ಡಿಸಿಸಿ ಬ್ಯಾಂಕ್‌ನ ಮುಂಭಾಗದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




