Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ನ ಜೊತೆ ಗಟ್ಟಿಯಾಗಿ ನಿಲ್ಲಬೇಕು: ಸುನೀಲ್‌ ಕುಮಾರ್‌ ಬಜಾಲ್‌
    News

    ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ನ ಜೊತೆ ಗಟ್ಟಿಯಾಗಿ ನಿಲ್ಲಬೇಕು: ಸುನೀಲ್‌ ಕುಮಾರ್‌ ಬಜಾಲ್‌

    adminBy adminSeptember 8, 2025

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಭತ್ತ ಕೃಷಿಕರಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಪ್ರದಾನ

    ಉಳ್ಳಾಲ: ನಗರೀಕರಣಕ್ಕೆ ನಮ್ಮಿಂದ ಎಂದಿಗೂ ವಿರೋಧವಿಲ್ಲ. ಆದರೆ ನಗರೀಕರಣದ ನೆಪದಲ್ಲಿ ರೈತರ ಜೀವನಾಡಿಯಾಗಿರುವ ಕೃಷಿಯನ್ನು ಸರ್ವನಾಶ ಮಾಡಿದರೆ ದೇಶದ ಅಭಿವೃದ್ಧಿ ಎಂದಿಗೂ ಸಾಧ್ಯವಿಲ್ಲ. ಕೃಷಿ ಅದರಲ್ಲೂ ಭತ್ತ ಕೃಷಿ ನಶಿಸಿ ಹೋಗುತ್ತಿರುವ ಈ ಕಾಲಘಟ್ಟದಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಭತ್ತ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಜತೆ ನಾವೆಲ್ಲರೂ ಗಟ್ಟಿಯಾಗಿ ನಿಲ್ಲಬೇಕಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಭಾನುವಾರ ಭತ್ತ ಕೃಷಿಕರಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಆರ್ಥಿಕ ಕ್ಷೇತ್ರಗಳ ಇತಿಮಿತಿ ಮೀರಿ ಏನೆಲ್ಲ ಒಳ್ಳೆಯ ಕೆಲಸ ಮಾಡಬಹುದೋ ಅವೆಲ್ಲವನ್ನೂ ಮಾಡಬಹುದು ಎಂಬುದಕ್ಕೆ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಮಾಡಿ ತೋರಿಸುತ್ತಿದೆ. ವೈವಿಧ್ಯಮಯ ಚಟುವಟಿಕೆಗಳೊಂದಿಗೆ ಸಮಾಜಮುಖಿ ಕೆಲಸವನ್ನು ಈ ಸಹಕಾರಿ ಸಂಘವು ಮಾಡುತ್ತಿದ್ದು, ಕೃಷಿಗೆ ಪ್ರೋತ್ಸಾಹ ನೀಡುವ ಕಾರ್ಯವು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ಕಮಲ ಕಾರ್ಯಕ್ರಮ ಉದ್ಘಾಟಿಸಿದರು. ಭತ್ತ ಕೃಷಿಕರಿಗೆ ಪ್ರೋತ್ಸಾಹ ಧನ ನೀಡಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ನೀಡಲಾಯಿತು.


    ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು, ಒಂದು ಎಕರೆಗೆ 5 ಸಾವಿರ ರೂ.ಗಳಂತೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಕಳೆದ ಮೂರು ವರುಷ ಗಳಿಂದ ಅಡಿಕೆ ಬೆಳೆಗೆ ಮೈಲುತುತ್ತನ್ನು ಉಚಿತವಾಗಿ ನೀಡುತ್ತಿದ್ದೇವೆ. ನಮ್ಮ ಕಾರ್ಯವ್ಯಾಪ್ತಿಗೆ ಒಳಪಟ್ಟ 14 ಗ್ರಾಮಗಳಲ್ಲಿ ಒಂದು ಸರಕಾರಿ ಶಾಲೆಯನ್ನು ಗುರುತಿಸಿ ಅಲ್ಲಿನ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಕೊಡೆ ಇನ್ನಿತರ ಕಲಿಕಾ ಪರಿಕರ ಪೂರೈಸುತ್ತಿದ್ದೇವೆ. ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಈ ಬಾರಿ ಸಂಘದ ವತಿಯಿಂದ ಪಿಲಾರಿನ ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸಿದ್ದಲ್ಲದೆ, ಇತ್ತೀಚೆಗೆ ಬೀರಿಯಲ್ಲಿ ನಡೆದ ಹಲಸು ಮೇಳ ಜಿಲ್ಲಾಮಟ್ಟದಲ್ಲಿ ಯಶಸ್ಸು ಕಂಡಿದೆ ಎಂದು ಹೇಳಿದರು.


    ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಹಮೀದ್ ಹಸನ್ ಮಾಡೂರು, ಕೋಟೆಕಾರು ಪಟ್ಟಣ ಪಂಚಾಯತ್‌ ಸದಸ್ಯರಾದ ರಾಘವ ಗಟ್ಟಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಕೆ.ಬಿ.ಅಬುಸಾಲಿ ಕಿನ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್, ನಿರ್ದೇಶಕರಾದ ಗಂಗಾಧರ ಯು.ಕೆ., ಕೃಷ್ಣಪ್ಪ ಸಾಲಿಯಾನ್, ಉದಯಕುಮಾರ್‌ ಶೆಟ್ಟಿ ಕೊಂಡಾಣಗುತ್ತು, ಅರುಣ್ ಕುಮಾರ್ ಯು., ರಾಘವ ಆರ್.ಉಚ್ಚಿಲ್, ರಾಘವ ಸಿ.ಉಚ್ಚಿಲ್, ಸುರೇಖಾ ಚಂದ್ರಹಾಸ್, ಸುನೀತಾ ಲೋಬೊ, ಕೃಷ್ಣಪ್ಪ ಬಾಬುನಾಯ್ಕ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಅರುಣ್ ಕುಮಾರ್ ಯು. ವಂದಿಸಿದರು. ಹರೀಶ್ ನೀಲಿಪಾಲು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhatta Krushige Protsaha Dhana Kotekaru Vyavasaya Seva Sahakari Bank Krushi Sunil Kumar Bajal
    Previous Articleಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2.10 ಕೋಟಿ ರೂ.ನಿವ್ವಳ ಲಾಭ, ಸದಸ್ಯರಿಗೆ 10.50% ಡಿವಿಡೆಂಡ್
    Next Article ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘಕ್ಕೆ 1.55 ಕೋಟಿ ರೂ. ಲಾಭ, ಸದಸ್ಯರಿಗೆ 12% ಡಿವಿಡೆಂಡ್

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.