Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ರೂ 5.99 ಕೋಟಿ ನಿವ್ವಳ ಲಾಭ 
    News

    ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ರೂ 5.99 ಕೋಟಿ ನಿವ್ವಳ ಲಾಭ 

    adminBy adminSeptember 11, 2025

    ಸಂಘದ 24ನೇ ವಾರ್ಷಿಕ ಮಹಾಸಭೆಯಲ್ಲಿ ಶೇ.13 ಡಿವಿಡೆಂಡ್ ಘೋಷಣೆ

    ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿ ರಾಜ್ಯಾದ್ಯಂತ 20 ಶಾಖೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 24ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪುತ್ತೂರು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷರಾದ ಎಸ್‌.ಆರ್‌.ಸತೀಶ್ಚಂದ್ರ ಅವರು, ಸಹಕಾರಿಯು ಗಣನೀಯ ಪ್ರಗತಿ ಸಾಧಿಸಲು ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ, ಸಹಕಾರಿಯ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ 20 ಶಾಖೆಗಳ ಮೂಲಕ ಸದಸ್ಯರಿಗೆ ಸೇವೆ ನೀಡುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ 2024-25ರ ಆರ್ಥಿಕ ವರ್ಷಾಂತ್ಯಕ್ಕೆ 49,257 ಸದಸ್ಯರು, ರೂ.9.99 ಕೋಟಿ ಪಾಲು ಬಂಡವಾಳವಿದೆ. ರೂ. 42.08 ಕೋಟಿ ವಿವಿಧ ನಿಧಿಗಳನ್ನು ಹೊಂದಿ ಸದೃಢವಾಗಿದೆ. ಸಹಕಾರಿಯು ತನ್ನ ಸದಸ್ಯರಿಂದ ರೂ.358 ಕೋಟಿ ಠೇವಣಾತಿ ಸಂಗ್ರಹಿಸಿ, ರೂ.330 ಕೋಟಿ ಸಾಲ ವಿತರಿಸಲಾಗಿದೆ. ರೂ.5.99 ಕೋಟಿ ನಿವ್ವಳ ಲಾಭ ದಾಖಲಿಸಿದ್ದು ಸದಸ್ಯರಿಗೆ ಶೇ.13 ಡಿವಿಡೆಂಡ್ ಘೋಷಿಸಲಾಯಿತು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ವಸಂತ ನಾಯಕ್ ಎ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ಸಹಕಾರಿಯ ಸದಸ್ಯರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.


    ಸಹಕಾರಿಯ ಉಪಾಧ್ಯಕ್ಷರಾದ ಉಮೇಶ್ ಪ್ರಭು ಕೆ, ನಿರ್ದೇಶಕರಾದ ದೇವಿಪ್ರಸಾದ್ ಕೆ, ಜಯರಾಮ ಪಿ, ಕೆ.ಹರೀಶ್ ಬೋರ್ಕರ್, ಹೇಮಂತ ಕುಮಾರ್ ಕೆ ಆರ್, ಪ್ರಕಾಶ್ಚಂದ್ರ ಪಿ, ರಮೇಶ್ಚಂದ್ರ ಎಂ, ರಾಜಗೋಪಾಲ ಬಿ, ದೇವಕಿ ಕೆ, ಸರಸ್ವತಿ ಎನ್ , ವೃತ್ತಿಪರ ನಿರ್ದೇಶಕರಾದ ಬಿ.ವಸಂತ ಶಂಕರ್, ವೇದವ್ಯಾಸ ಕೆ, ಕಾರ್ಯಾನುಗುಣ ನಿರ್ದೇಶಕರಾದ ಶ್ರೀಕಾಂತ ರಾವ್ ವಿ.ಡಿ, ರವೀಶ ಪಿ ಹಾಗೂ ವರದಿ ವರ್ಷದ ಸನ್ನದು ಲೆಕ್ಕಪರಿಶೋಧಕರಾದ ಸಿ.ಎ ಚಂದ್ರಶೇಖರ್ ಎ.ಜಿ ಉಪಸ್ಥಿತರಿದ್ದರು.


    ಸಹಕಾರಿಯ ಹಿರಿಯ ಅಧಿಕಾರಿ ಶ್ರೀರಂಜಿತಾ ಎ.ವಿ ಹಾಗೂ ವೈಷ್ಣವಿ ಪ್ರಾರ್ಥಿಸಿದರು. ಮುಖ್ಯ ಕಾರ್ಯನಿವರ್ಹಣಾಧಿಕಾರಿ ವಸಂತ ನಾಯಕ್ ಎ ಸ್ವಾಗತಿಸಿ , ವಿಭಾಗೀಯ ವ್ಯವಸ್ಥಾಪಕರಾದ ಪ್ರೇಮಚಂದ್ರ ನಾಯಕ್ ವಂದಿಸಿದರು. ವ್ಯವಸ್ಥಾಪಕರಾದ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾವನಾ ಸುಗಮ ಸಂಗೀತ ಕಲಾಶಾಲೆಯ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗದವರಿಂದ “ಸಂಗೀತ ಸಾಂಗತ್ಯ” ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

    ರಜತ ಮಹೋತ್ಸವ ವರ್ಷಾಚರಣೆ ಉದ್ಘಾಟನೆ
    ಸಹಕಾರಿಯು 24 ಸಂವತ್ಸರಗಳನ್ನು ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಸಹಕಾರಿಯ ರಜತ ಮಹೋತ್ಸವ ವರ್ಷಾಚರಣೆಯ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ತೂಗುಸೇತುವೆಯ ಹರಿಕಾರ ಗಿರೀಶ್ ಭಾರದ್ವಾಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು.
    ಮುಖ್ಯ ಅತಿಥಿಗಳಾಗಿ ಸಹಕಾರಿಯ ಹಿರಿಯ ಸದಸ್ಯರು, ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಅಣ್ಣಾ ವಿನಯಚಂದ್ರ ಇವರು ಸಹಕಾರಿ ಕ್ಷೇತ್ರದಲ್ಲಿ ಸರಸ್ವತಿ ಸಹಕಾರಿಯ ಸಾಧನೆಯನ್ನು ಶ್ಲಾಘಿಸಿ, ರಜತ ಮಹೋತ್ಸವಕ್ಕೆ ಅತ್ಯತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯಪ್ರವೃತ್ತರಾಗಲು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹಕಾರಿಯ ಹಿರಿಯ ಸದಸ್ಯರು, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯರೂ ಆಗಿರುವ ಎಸ್.ಆರ್ ರಂಗಮೂರ್ತಿ ಇವರು ಸರಸ್ವತಿ ಸಹಕಾರಿಯು ತನ್ನ 24 ವರ್ಷಗಳ ಸೇವೆಯಲ್ಲಿ ಕಪ್ಪುಚುಕ್ಕೆಯಿಲ್ಲದೆ ಸೇವೆ ಸಲ್ಲಿಸಿದುದಕ್ಕೆ ಅಭಿನಂದನೆ ಸಲ್ಲಿಸಿ ಮತ್ತಷ್ಟು ಉತ್ಕೃಷ್ಟ ಸೇವೆಯನ್ನು ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Girish Bharadwaj S R Sathishchandra S.R Rangamurthy Shree Saraswathi Credit Co Operative Society
    Previous Articleಶ್ರೀ ಗುರು ಸೌಹಾರ್ದ ಸಹಕಾರಿ ಸಂಘದ 18ನೇ ವಾರ್ಷಿಕ ಸಾಮಾನ್ಯ ಸಭೆ
    Next Article ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2.58 ಕೋಟಿ ರೂ. ನಿವ್ವಳ ಲಾಭ, ಶೇ.25 ಡಿವಿಡೆಂಡ್ ಘೋಷಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.