Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.20 ಕೋಟಿ ರೂ. ಲಾಭ, ಶೇ.15 ಡಿವಿಡೆಂಡ್
    News

    ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.20 ಕೋಟಿ ರೂ. ಲಾಭ, ಶೇ.15 ಡಿವಿಡೆಂಡ್

    adminBy adminSeptember 12, 2025

    ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಘೋಷಣೆ

    ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ ವಾರ್ಷಿಕ 233.13 ಕೋಟಿ ರೂ. ವ್ಯವಹಾರ ನಡೆಸಿದ್ದು, 1.20 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ. ಮಳೆ ವಿಪರೀತವಾದ್ದರಿಂದ ಬೆಳೆಗಳಿಗೆ ಕೊಳೆ ರೋಗ ಬಂದು ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಬಂದಿದೆ. ಸರಕಾರ ಈ ಬಾರಿ ಬೆಳೆ ವಿಮೆ ಮೊತ್ತವನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

    ಸಂಘದಲ್ಲಿ 36 ಕೋಟಿ ರೂ. ಅಧಿಕ ಠೇವಣಿಯಿದ್ದು, 42 ಕೋಟಿ ರೂ. ಹೊರಬಾಕಿ ಸಾಲದಲ್ಲಿ ಶೇ.99ರಷ್ಟು ವಸೂಲಾತಿ ಮಾಡಿ ಆಡಿಟ್ ವರ್ಗಿಕರಣದಲ್ಲಿ ಎ ತರಗತಿ ಪಡೆದಿದೆ. ಈ ಸಾಧನೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಿದ್ದಾರೆ ಎಂದು ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ತಿಳಿಸಿದರು.
    ಸಂಘದ ಕಾರ್ಯವ್ಯಾಪ್ತಿಯಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚುಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಅತೀ ಹೆಚ್ಚು ಗೊಬ್ಬರ ಖರೀದಿಸಿದ ಹಾಗೂ ಅತೀ ಹೆಚ್ಚು ಭತ್ತ ಬೆಳೆದು ಸಾಧನೆ ಮಾಡಿದ ರೈತರನ್ನು ಸನ್ಮಾನಿಸಲಾಯಿತು.


    ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಿರ್ದೇಶಕರಾದ ವಿಠಲ ಭಂಡಾರಿ, ಉದಯ ಕುಮಾರ್ ಎ., ಪದ್ಮನಾಭ ಗೌಡ ಕೆ., ಅಶ್ವಿನಿ ರವಿ ನಾಯ್ಕ್‌, ಪ್ರೇಮಾವತಿ ಸುನಿಲ್ ಕೆ., ರವಿಚಂದ್ರ ಪಿ., ವಿಶ್ವನಾಥ ಕಕ್ಕಿ, ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.
    ಸಂಘದ ಸಿಇಒ ನವೀನ್ ಕೆ. ವರದಿ ಮಂಡಿಸಿದರು. ಸಂಘದ ಸಿಬಂದಿ ಸುಂದರ ಗೌಡ ಕೆ. ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಶ್ರೀನಾಥ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Cooperative Registrar Kokkada Prathamika Krushi Pattina Sahakara Sangha Kushalappa Gowda Poovaje Varshika Mahasabhe
    Previous Articleಬೆಳ್ಮಣ್‌ ಕುಂಭನಿಧಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಮಹಾಸಭೆ
    Next Article ಸೆ.14ರಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ 116ನೇ ಮಹಾಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.