Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿಗಳ ಧರ್ಮಜಾಗೃತಿ ಯಾತ್ರೆ ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕರ ಮನವಿ
    News

    ಸಹಕಾರಿಗಳ ಧರ್ಮಜಾಗೃತಿ ಯಾತ್ರೆ ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕರ ಮನವಿ

    adminBy adminSeptember 13, 2025

    ಬೆಳ್ತಂಗಡಿ: ಪವಿತ್ರ ತೀರ್ಥಕ್ಷೇತ್ರ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲಿನ ಆರೋಪಗಳ ವಿರುದ್ಧ ಷಡ್ಯಂತ್ರ ಬಯಲಿಗೆಳೆದು ವಿಷಯದ ಸತ್ಯಾಸತ್ಯತೆಗಾಗಿ ಮತ್ತು ಪ್ರಕರಣಕ್ಕೆ ಅಂತ್ಯ ಹಾಡುವ ಸಲುವಾಗಿ ಕರಾವಳಿ ಜೆಲ್ಲೆಗಳ ಎಲ್ಲಾ ಸಹಕಾರಿಗಳ ಒಗ್ಗೂಡುವಿಕೆಯಿಂದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸೆ.14ರಂದು ಮಧ್ಯಾಹ್ನ ಧರ್ಮಸ್ಥಳದಲ್ಲಿ ನಡೆಯಲಿರುವ ಸಹಕಾರಿಗಳ ಧರ್ಮಜಾಗೃತಿ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸಿಬ್ಬಂದಿಗಳು ಭಾಗವಹಿಸಿ ಯಾತ್ರೆಯನ್ನು ಯಶಸ್ವಿಗೊಳಿಸುವಂತೆ ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಚ್.ಪ್ರಭಾಕರ ಬೆಳ್ತಂಗಡಿ ಇವರು ಪತ್ರಿಕಾ ಹೇಳಿಕೆ ಮೂಲಕ ಸಹಕಾರಿಗಳನ್ನು ವಿನಂತಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ಕರಾವಳಿ ಜೆಲ್ಲೆಗಳಲ್ಲಿ ಹಲವಾರು ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸ್ವಂತ ಕಟ್ಟಡ ಇಲ್ಲದ ಹಾಲು ಉತ್ಪಾದಕ ಸಹಕಾರ ಸಂಘಗಳು ಕಟ್ಟಡ ನಿರ್ಮಾಣಕ್ಕೆ ಬೇಡಿಕೆ ಇಟ್ಟಾಗ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ನೇರವು ನೀಡಿರುವುದಲ್ಲದೇ ಬೆಳ್ತಂಗಡಿ ತಾಲೂಕಿನಲ್ಲಿ ಸ್ವಸಹಾಯ ಗುಂಪುಗಳ ಮೂಲಕ ಹೈನುಗಾರಿಕೆಗೆ ಹೆಚ್ಚಿನ ಸಹಕಾರ ನೀಡಿರುವುದರಿಂದ ಬೆಳ್ತಂಗಡಿ ತಾಲೂಕು ಅತೀ ಹೆಚ್ಚು ಹಾಲು ಉತ್ಪಾದಿಸುವ ತಾಲೂಕಾಗಿ ಒಕ್ಕೂಟದಲ್ಲಿ ಹೆಸರು ಗಳಿಸಲು ಸಾಧ್ಯವಾಗಿದೆ. ಹಿಂದೂ ಧಾರ್ಮಿಕತೆಗೆ ಸಹಕಾರ ಮತ್ತು ಭಜನಾ ಕಮ್ಮಟಗಳನ್ನು ಏರ್ಪಾಡು ಮಾಡುವ ಮೂಲಕ ಕರಾವಳಿಯಲ್ಲಿ ಕುಣಿತ ಭಜನೆಯ ಪ್ರಾರಂಭಕ್ಕೆ ಚಾಲನೆ ನೀಡಿದ ಕೀರ್ತಿ ಧರ್ಮಸ್ಥಳ ಕ್ಷೆತ್ರಕ್ಕೆ ಸಲ್ಲುತ್ತದೆ.
    ಈ ನಿಟ್ಟಿನಲ್ಲಿ ಕ್ಷೇತ್ರದ ಪಾವಿತ್ರ್ಯ ಕಾಪಾಡುವ ಸಲುವಾಗಿ ನಾವೆಲ್ಲರೂ ಧರ್ಮಸ್ಥಳದ ಧ್ವನಿಯಾಗಿ ಯಾತ್ರೆಯಲ್ಲಿ ಭಾಗವಹಿಸೋಣ ಎಂದೂ ಅವರು ವಿನಂತಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Dakshina Kannada Sahakari Haalu Utpaadakara Okkuta Dharma Jagruthi Yatre Prabhakara H Shree Kshetra Dharmastala
    Previous Articleಪೋತ್ನಾಳ ಸಹಕಾರಿಯ 12ನೇ ವಾರ್ಷಿಕ ಮಹಾಸಭೆ
    Next Article ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.