Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನರ ಆರೋಗ್ಯದ ಕಾಳಜಿಯೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಯಶಸ್ಸಿಗೆ ಕಾರಣ
    News

    ಜನರ ಆರೋಗ್ಯದ ಕಾಳಜಿಯೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಯಶಸ್ಸಿಗೆ ಕಾರಣ

    adminBy adminSeptember 15, 2025

    ಹಂಪನಕಟ್ಟೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ತಪಾಸಣಾ ಶಿಬಿರದಲ್ಲಿ ಲಯನ್ ನರಸಿಂಹ ಪೈ ಅಭಿಮತ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಂಪನಕಟ್ಟ ಶಾಖೆ ಮತ್ತು ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರ ಜಂಟಿ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸನ್‌ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣಾ ಶಿಬಿರವು ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡದ ಎರಡನೇ ಮಹಡಿಯಲ್ಲಿ ಇತ್ತೀಚೆಗೆ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ಕಾರ್ಯಕ್ರಮವನ್ನು ನಿವೃತ್ತ ಸಹಕಾರಿ ಸಂಘಗಳ ಉಪನಿಬಂಧಕ ಚಂದ್ರಶೇಖರ್ ಸುವರ್ಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇದರ ಅಧ್ಯಕ್ಷ ಲಯನ್ ನರಸಿಂಹ ಪೈ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.


    ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸೀತಾರಾಮ್ ಎನ್ ಮಾತನಾಡಿ ಹಿರಿಯ ನಾಗರಿಕರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರಗಳು ಅಗತ್ಯವಾಗಿರುತ್ತವೆ. ಆದ್ದರಿಂದ ಎಲ್ಲರೂ ಈ ಶಿಬಿರದ ಪ್ರಯೋಜನ ಪಡೆದು ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದರು.
    ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ ಮಾತನಾಡಿ, “ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 89ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಶಿಬಿರಾರ್ಥಿಗಳಿಗೆ ಉಚಿತ ಔಷಧ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು 19,000ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘವು ಹಿರಿಯ ನಾಗರಿಕರ ಆರೋಗ್ಯದ ಕಾಳಜಿಯ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಪ್ರತಿವರ್ಷ ನಿರಂತರವಾಗಿ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಮಹಾಸಭೆಯ ದಿನದಂದು ಆಯೋಜಿಸುತ್ತಾ ಬರುತ್ತಿದೆ. ಈ ಶಿಬಿರವು ಎಲ್ಲ ಶಿಬಿರಾರ್ಥಿಗಳಿಗೆ ಉಪಯುಕ್ತವಾಗಲಿ ಎಂದು ಹೇಳಿದರು.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ರಮಾನಾಥ್ ಸನಿಲ್, ಬಿ.ಪಿ.ದಿವಾಕರ್, ಗೋಪಾಲ್ ಎಂ, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷರಾದ ವಾಮನ್ ಕೆ, ದ.ಕ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಉಮೇಶ್, ನಿಕಟಪೂರ್ವ ಅಧ್ಯಕ್ಷರಾದ ಬಿ.ಎಂ ರಾಜ್ ಗೋಪಾಲ್, ಲಯನ್ಸ್ ಮತ್ತು ಲಿಯೊ ಕ್ಲಬ್ ಮಂಗಳೂರು ಇದರ ಝೋನಲ್ ಚೇರ್ ಪರ್ಸನ್ ಲಯನ್ ಶೀನ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ನ ದಂತವೈದ್ಯರಾದ ಸೌಮ್ಯ ಉಪಸ್ಧಿತರಿದ್ದರು.
    ೧೫೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಪ್ರಣೀತಾ ಸ್ವಾಗತಿಸಿ, ಶಾಖಾಧಿಕಾರಿ ಅಕ್ಷತಾ ವಂದಿಸಿದರು. ಹಿರಿಯ ಶಾಖಾಧಿಕಾರಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Atmashakthi Vividhoddesha Sahakari Sangha Banking Chitharanjan Bolar Co Operative ministry Cooperative Da.ka Jilla Nivrutta Sarakari Noukara Sangha Health Camp Lions Club Mangaluru Aditya
    Previous Articleಸಹಕಾರಿ ಬಂಧುಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಜಾಗೃತಿ ಸಮಾವೇಶ
    Next Article ಕೊಂಕಣ್ ಕ್ಯಾಥೋಲಿಕ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕಾರ್ಕಳ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.