Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿಯ 13ನೇ ವಾರ್ಷಿಕ ಸಾಮಾನ್ಯ ಸಭೆ
    News

    ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿಯ 13ನೇ ವಾರ್ಷಿಕ ಸಾಮಾನ್ಯ ಸಭೆ

    adminBy adminSeptember 15, 2025

    ತೊಕ್ಕೊಟ್ಟು: ದಕ್ಷಿಣಕನ್ನಡ ಜಿಲ್ಲೆಯ ಜನ್ಮಭೂಮಿ ಸ್ವಸಹಾಯ ಸೌಹಾರ್ದ ಸಹಕಾರಿ ಸಂಘ ತೊಕ್ಕೊಟ್ಟು ಇದರ 13ನೇ ವರ್ಷದ ವಾರ್ಷಿಕ ಮಹಾಸಭೆ ಭಾನುವಾರ ಕುತ್ತಾರು ಎಂವೈಎಂ ಸಭಾಂಗಣದಲ್ಲಿ ಉಪಾಧ್ಯಕ್ಷರಾದ ಸುಂದರ ಗಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಸಹಕಾರಿಯ ಉಪಾಧ್ಯಕ್ಷರಾದ ಸುಂದರ ಗಟ್ಟಿ, ಸೊಸೈಟಿಯ ನಿರ್ದೇಶಕರು ಹಾಗೂ ಕಾನೂನು ಸಲಹೆಗಾರರು ದೀಪ ಪ್ರಜ್ವಲಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘವು 2024-25ರ ಅವಧಿಯಲ್ಲಿ ರೂ. 4.21 ಕೋಟಿ ವ್ಯವಹಾರ ನಡೆಸಿ ರೂ.13,86,779.82 ಲಾಭ ಗಳಿಸಿದೆ. ಲಾಭಾಂಶದ ವರದಿಯನ್ನು ಸುಂದರ ಗಟ್ಟಿ ಸಭೆಯ ಮುಂದೆ ಮಂಡಿಸಿ ಸದಸ್ಯರಿಗೆ ಶೇ.5 ಡಿವಿಡೆಂಡ್ ಘೋಷಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಕ್ರಮ್ ಶೆಟ್ಟಿಯವರು 2024 -25ನೇ ಸಾಲಿನ ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು.


    2025ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಗಳಿಸಿದ ಸ್ವಸಹಾಯ ಸಂಘದ ಸದಸ್ಯರ ಹತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 1ರಿಂದ 10ನೇ ತರಗತಿಯವರೆಗಿನ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. 2 ಅತ್ಯುತ್ತಮ ಸ್ವಸಹಾಯ ಸಂಘ ಪ್ರಶಸ್ತಿ ಹಾಗೂ 12 ಉತ್ತಮ ಸ್ವಸಹಾಯ ಸಂಘಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಸಹಕಾರಿಯ ನಿರ್ದೇಶಕರಾದ ಸೂರಜ್, ಜಗನ್ನಾಥ ಶೆಟ್ಟಿ, ಮಹೇಶ, ಹರೀಶ್ಚಂದ್ರ ಖಾರ್ವಿ, ಚಂದು ನಾಯ್ಕ, ವಿಶ್ವನಾಥ, ಗೀತಾ ಬಿ.ನಾಯ್ಕ, ಶೋಭಾ ಕಜೆ, ನಾಗವೇಣಿ ಶೆಟ್ಟಿ, ವೀಣಾ ಭಟ್, ಅಮಿತಾ ಶೆಟ್ಟಿ, ಕಾನೂನು ಸಲಹೆಗಾರರಾದ ಲವೀಶಾ ಜಿ, ನೇಮಕಾತಿ ಸಮಿತಿಯ ಬಾಹ್ಯತಜ್ಞರಾದ ಶಶಿಧರ್ ಶೆಟ್ಟಿ ಕೆರಮ, ಸಹಕಾರಿಯ ಸಿಬ್ಬಂದಿ, ಪಿಗ್ಮಿ ಏಜೆಂಟರು ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು. ಸಹಕಾರಿಯ ಸಿಬ್ಬಂದಿಗಳು ಪ್ರಾರ್ಥಿಸಿದರು. ಯೋಜನಾಧಿಕಾರಿ ಜಿತೇಂದ್ರ ಪಿ ಸ್ವಾಗತಿಸಿದರು. ಸುಕೇಶ್ ಮಂಜನಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Janmabhoomi Swasahaya Souharda Sahakari Sangha Tokkottu Souharda Sahakari Sundara Gatty
    Previous Articleಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ಸಾಮಾನ್ಯ ಸಭೆ
    Next Article ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಮಹಾಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.