Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸವಣೂರು ಸೀತಾರಾಮ ರೈಗಳು ವಿದ್ಯಾನಿಧಿ ಯೋಜನೆ ಪ್ರಾರಂಭಿಸಿರುವುದು ಉತ್ತಮ ಕಾರ್ಯ
    News

    ಸವಣೂರು ಸೀತಾರಾಮ ರೈಗಳು ವಿದ್ಯಾನಿಧಿ ಯೋಜನೆ ಪ್ರಾರಂಭಿಸಿರುವುದು ಉತ್ತಮ ಕಾರ್ಯ

    adminBy adminSeptember 16, 2025

    ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಶ್ಲಾಘನೆ

    ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾನಿಧಿ-ಧನಸಹಾಯ ವಿತರಣೆ

    ಪುತ್ತೂರು: ಆರ್ಥಿಕವಾಗಿ ಹಿಂದುಳಿದ ಸರಕಾರಿ ಪ್ರಾಥಮಿಕ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ವರ್ಷಂಪ್ರತಿಯಂತೆ ಸಂಘದ ‘ಧರ್ಮಾರ್ಥ’ ಮತ್ತು ‘ವಿದ್ಯಾಸಂಸ್ಥೆʼ ನಿಧಿಯಿಂದ ಧನಸಹಾಯ ವಿತರಣೆ ನೀಡುವ ವಿಶೇಷ ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲೊಟ್ಟು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸವಣೂರು ಸೀತಾರಾಮ ರೈಯವರು ತಮ್ಮ ಬಾಲ್ಯ ಜೀವನದಲ್ಲಿ ತುಂಬಾ ಕಷ್ಟಪಟ್ಟು ಓದಿ, ಇಂದು ಉನ್ನತವಾದ ಸ್ಥಾನದಲ್ಲಿದ್ದಾರೆ. ಸರಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಿಗಲೆಂಬ ನಿಟ್ಟಿನಲ್ಲಿ ಅವರು ತಮ್ಮ ಆದರ್ಶ ಸಹಕಾರ ಸಂಸ್ಥೆಯ ಮೂಲಕ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭ ಮಾಡಿರುವುದು ಉತ್ತಮವಾದ ಕಾರ್ಯವಾಗಿದೆ. ಆದರ್ಶ ಸಹಕಾರ ಸಂಸ್ಥೆಯನ್ನು ಆದರ್ಶಯುತವಾಗಿ ಬೆಳೆಸಿರುವ ಸವಣೂರು ಸೀತಾರಾಮ ರೈಯವರ ಶ್ರಮವನ್ನು ನಾವೆಲ್ಲರೂ ಮೆಚ್ಚಬೇಕು ಎಂದು ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಮಾರಂಭವನ್ನು ಉದ್ಘಾಟಿಸಿದ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಜೈರಾಜ್ ಬಿ.ರೈಯವರು ಮಾತನಾಡಿ ಸರಕಾರಿ ಶಾಲೆಗಳಲ್ಲಿ ಕಲಿಯುವ ಬಡ ಮಕ್ಕಳ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸವಣೂರು ಕೆ.ಸೀತಾರಾಮ ರೈಯವರು ತಮ್ಮ ಆದರ್ಶ ಸಹಕಾರ ಸಂಸ್ಥೆಯ ಮೂಲಕ ವಿದ್ಯಾನಿಧಿ-ಧನಸಹಾಯ ಯೋಜನೆಯನ್ನು ಆರಂಭಿಸಿರುವುದು ಪುಣ್ಯದ ಕೆಲಸವಾಗಿದೆ ಎಂದು ಹೇಳಿದರು.


    ಯೋಜನೆ ಭಾರೀ ಪ್ರಯೋಜನಕಾರಿ
    ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈಯವರು ಮಾತನಾಡಿ, ಮಧ್ಯಮ ವರ್ಗದ ಮಕ್ಕಳು ಹೆಚ್ಚಾಗಿ ಕಲಿಯುತ್ತಿರುವ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸವಣೂರು ಸೀತಾರಾಮ ರೈಯವರು ಪ್ರಾರಂಭ ಮಾಡಿರುವ ವಿದ್ಯಾನಿಧಿ-ಧನಸಹಾಯ ಯೋಜನೆ ಭಾರೀ ಪ್ರಯೋಜನಕಾರಿಯಾಗಿದೆ. ಸೀತಾರಾಮ ರೈಯವರು ಆದರ್ಶ ಸಹಕಾರ ಸಂಸ್ಥೆಯನ್ನು ಜಿಲ್ಲಾಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಕಟ್ಟಿ ಬೆಳೆಸಿದ್ದಾರೆ. ಈ ಸಂಸ್ಥೆಯ ಮೂಲಕ ಮತ್ತಷ್ಟು ಸೇವಾಕಾರ್ಯಗಳು ನಡೆಯಲಿ ಎಂದು ಆಶಿಸಿದರು.
    ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ ಆದರ್ಶ ಸಹಕಾರ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮಂಗಳೂರು ಮತ್ತು ಈಶ್ವರಮಂಗಲದಲ್ಲಿ ಶಾಖೆಗಳನ್ನು ಆರಂಭಿಸಲಿದೆ. ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಬಿಸಿದ್ದೇವೆ ಎಂದು ಹೇಳಿದರು.
    ಸಂಘದ ಉಪಾಧ್ಯಕ್ಷ ಎನ್‌.ಸುಂದರ ರೈ ಸವಣೂರು, ನಿರ್ದೇಶಕ ಅಶ್ವಿನ್‌ ಎಲ್‌.ಶೆಟ್ಟಿ, ಮಹಾಪ್ರಬಂಧಕ ವಸಂತ ಜಾಲಾಡಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adarsha Vividhoddesha Sahakari Sangha Putturu Savanuru Seetharama rai Shashikumar Rai balyottu Vidyanidhi Yojane
    Previous Articleಬೋಳಾರ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ 12% ಡಿವಿಡೆಂಡ್‌ ಘೋಷಣೆ
    Next Article ಅಧ್ಯಾಪಕರ ಸಹಕಾರಿ ಸಂಘ ವಿಟ್ಲ ರೂ. 2.09 ಕೋಟಿ ಲಾಭ, 15% ಡಿವಿಡೆಂಡ್ ಘೋಷಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.