Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಭಾವದಿಂದ ಸಹಕಾರಿ ಕ್ಷೇತ್ರದ ಉನ್ನತಿ
    News

    ಸಹಕಾರ ಭಾವದಿಂದ ಸಹಕಾರಿ ಕ್ಷೇತ್ರದ ಉನ್ನತಿ

    adminBy adminSeptember 21, 2025

    ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ

    ಅರಸೀಕೆರೆ: ಒಬ್ಬರಿಗೊಬ್ಬರ ಸಹಕಾರದಿಂದ ಸಹಕಾರಿ ಕ್ಷೇತ್ರವು ಉನ್ನತ ಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ, ಮಾಡಾಳು ಶ್ರೀ ನಿರಂಜನ ಪೀಠದ ಪೀಠಾಧ್ಯಕ್ಷರಾದ ರುದ್ರಮುನಿ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.


    https://chat.whatsapp.com/JVAtKKe2M19AFO3W5629ZS?mode=ems_copy_t ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮ ನಿರಂಜನ ಪೀಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಮೊದಲನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.
    ಸಹಕಾರ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ನಿರ್ದೇಶಕರು ಹಾಗೂ ನೌಕರ ವರ್ಗ ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ಬಡವ ಬಲ್ಲಿದ ಎಂಬ ತಾರತಮ್ಯವಿಲ್ಲದೆ ಉತ್ತಮ ಮನೋಭಾವದಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗುವುದಲ್ಲದೆ ಸಂಘದ ಷೇರುದಾರರಿಗೆ ಮತ್ತು ರೈತರಿಗೆ ಸಾಲ ನೀಡಲು ಕೂಡ ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲರೂ ಸಂಘದ ಅಭ್ಯುದಯಕ್ಕೆ ಶ್ರಮಿಸುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಸ್ವಾಮೀಜಿ ಕಿವಿಮಾತು ಹೇಳಿದರು.
    ಗ್ರಾಮೀಣ ಭಾಗದಲ್ಲಿ ಇಂತಹ ಸಹಕಾರ ಸಂಘಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಹಿನ್ನಡೆಯಲ್ಲಿರುವ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿದಾಗ ಮಾತ್ರ ಅವರ ಬದುಕು ಹಸನಾಗುತ್ತದೆ ಎಂದರು.


    ಸೌಹಾರ್ದ ವಿವಿಧೋದ್ದೇಶ ಸಹಕಾರ ಸಂಘಗಳ ಆಡಳಿತ ಮಂಡಳಿ ಮೈಸೂರು ಇದರ ಸಲಹೆಗಾರರಾದ ಶೇಖರ್ ಕೌಂಡಿನ್ಯ ಸಹಕಾರ ಸಂಘಗಳ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿದರು.
    ಸಹಕಾರಿ ಸಂಘದ ಉಪಾಧ್ಯಕ್ಷ ಎನ್.ಜಿ ಮರುಳ ಸಿದ್ದಸ್ವಾಮಿ ನಾಗಸಮುದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಸಂಘದ ಕಾರ್ಯನಿರ್ವಹಣಾಧಿಕಾರಿ ಆರ್.ಬಿ.ಸುಷ್ಮಾ 2024-25ನೇ ಸಾಲಿನ ವರದಿ ವಾಚಿಸಿದರು. ಅರಸೀಕೆರೆ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಎಸ್.ಎಂ ಗಂಗಾಧರ್, ನಿರ್ದೇಶಕರಾದ ಎಲ್.ಸಿ.ಚಂದ್ರಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್.ವಿ ಸ್ವಾಮಿ, ಗ್ರಾಮ ಪಂಚಾಯತ್ ಸದಸ್ಯ ಕೊಡ್ಲಿ ಬಸವರಾಜ್, ಮುಖಂಡರಾದ ಮಾಡಾಳು ಶಿವಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Maadalu Shree Niranjana Peeta Shree Niranjana Peeta Souharda Sahakari Sangha Shree Niranjana Rudramuni Swameeji
    Previous Articleಸಹಕಾರ ಸಂಘಗಳು ದೇಶೀಯ ಉತ್ಪನ್ನಗಳ ಉತ್ಪಾದನೆಯೊಂದಿಗೆ ಬಳಕೆಗೆ ಉತ್ತೇಜನ ನೀಡಿದಾಗ ದೇಶದ ಜಿಡಿಪಿ ಏರಿಕೆಯಾಗಲು ಸಾಧ್ಯ
    Next Article ಕಿರಣ ಸ್ವ-ಸಹಾಯ ಸೌಹಾರ್ದ ಸಹಕಾರಿಗೆ ರೂ.25.59 ಲಕ್ಷ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.