Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ 15% ಡಿವಿಡೆಂಡ್
    News

    ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ 15% ಡಿವಿಡೆಂಡ್

    adminBy adminSeptember 22, 2025

    ಕೋಡಿ ಕನ್ಯಾಣ: ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕೋಡಿ ಕನ್ಯಾಣದ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ಜರುಗಿತು.
    ಸಂಸ್ಥೆಯ ಅಧ್ಯಕ್ಷರಾದ ಶಂಭು ಪೂಜಾರಿ ಸ್ವಾಗತಿಸಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು 100 ಕೋಟಿಗೂ ಅಧಿಕ ವ್ಯವಹಾರ ನಡೆಸಿದ್ದು 16 ಲಕ್ಷ ರೂ.ಗೂ ಅಧಿಕ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡಾ 15ರಷ್ಟು ಡಿವಿಡೆಂಡ್ ವಿತರಿಸಲಾಗುತ್ತಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಸದಸ್ಯರು, ಸಿಬ್ಬಂದಿ ವರ್ಗ ಕಾರಣರಾಗಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ವಾರ್ಷಿಕ ಮಹಾಸಭೆಯ ಆಡಳಿತ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಲೆಕ್ಕಪರಿಶೋಧನಾ ವರದಿಯನ್ನು ವ್ಯವಸ್ಥಾಪಕ ಸಂದೀಪ್ ಕರ್ಕೇರ ವಾಚಿಸಿದರು. ಸಂಸ್ಥೆಯ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕರ್ಕೇರ ಮಂಡಿಸಿದರು.
    ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌ ಸಂಸ್ಥೆಯ ಬೆಳವಣಿಗೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮಾಡುತ್ತಿರುವ ಸಮಾಜಸೇವೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿಸ, ಸಹಕಾರಿ ರಂಗಕ್ಕೆ ಸೌಹಾರ್ದ ಸಹಕಾರಿಗಳ ಕೊಡುಗೆಯ ಬಗ್ಗೆ ವಿವರಿಸಿದರು.


    ಈ ವೇಳೆ ಸಂಸ್ಥೆಯ ನಿರ್ದೇಶಕರಾದ ಭಾಸ್ಕರ ಕಾಂಚನ್, ದಯಾನಂದ ಕರ್ಕೇರ, ಲಕ್ಷ್ಮಣ ಖಾರ್ವಿ, ರಾಘವೇಂದ್ರ ಸುವರ್ಣ, ಉದಯ ಕಾಂಚನ್, ಜಯಕುಮಾರ್ ಎ.ಎಸ್, ರೊನಾಲ್ಡ್ ಡಿಸೋಜ, ಆಶಾ ಉಪಾಧ್ಯ, ಜಯಂತಿ ಎಸ್ ಮೊಗವೀರ ಉಪಸ್ಥಿತರಿದ್ದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80ಕ್ಕೂ ಅಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಸಂದೀಪ್ ಕರ್ಕೇರ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Raghavendra Karkera Shambhu Poojary Shree Ramanjaneya Vividhoddesha Souharda Sahakari Niyamitha
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸತತ ಉನ್ನತ ಸಾಧನೆಗೆ ಸದಸ್ಯರ ಶ್ಲಾಘನೆ
    Next Article ಅನನ್ಯ ಸೌಹಾರ್ದ ಸಹಕಾರಿ ಸಂಘದ ಆರನೇ ವಾರ್ಷಿಕ ಮಹಾಸಭೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.