ಸಿದ್ದಕಟ್ಟೆ: ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸತತ 33 ವರ್ಷ ಕಾಲ ಸೇವೆ ಸಲ್ಲಿಸಿ ಪದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿಪೂರ್ವ ಕಾಲೇಜು ಹೊಸನಗರ, ಶಿವಮೊಗ್ಗ ಜೆಲ್ಲೆಗೆ ವರ್ಗಾವಣೆಗೊಂಡಿರುವ ಶ್ರೀನಿವಾಸ ನಾಯ್ಕ ಅವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಲಾಯಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಧ್ಯಕ್ಷರಾದ ಪ್ರಭಾಕರ ಪ್ರಭು ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


