ಬೆಳ್ತಂಗಡಿ; ವಿಧಾನ ಪರಿಷತ್ ಮಾಜಿ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಇವರನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಖಾಲಿ ಇದ್ದ ೩೯ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರ ಮೆಸ್ಕಾಂಗೆ ಹರೀಶ್ ಕುಮಾರ್ ಅವರನ್ನು ನೇಮಕ ಮಾಡಿದೆ. 1978ರಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ ಹರೀಶ್ ಕುಮಾರ್ ಅವರು, 1978 ರಲ್ಲಿ ನಡೆದ ಐತಿಹಾಸಿಕ ಚಿಕ್ಕಮಗಳೂರು ಉಪಚುನಾವಣೆಯಲ್ಲಿ (ಇಂದಿರಾ ಗಾಂಧಿ ಸ್ಪರ್ಧಿಸಿದ್ದರು) ಕೆಲಸ ಮಾಡಿದ್ದರು. ಬಳಿಕ ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ (1980-1984), ಬೆಳ್ತಂಗಡಿ ಭೂ ನ್ಯಾಯಮಂಡಳಿ ಸದಸ್ಯರಾಗಿ (1981-1983) ನೇಮಕಗೊಂಡಿದ್ದರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಅವಧಿಗೆ (1984-1986 ಮತ್ತು 2004-2017) ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, (1986-1990), ಜಿಲ್ಲಾ ಪರಿಷತ್ ಸದಸ್ಯರಾಗಿ (1987-1992) ಕೆಲಸ ಮಾಡಿದ್ದರು. ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ (1993-2000), ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್‌ನ ಸಹ ಅಧ್ಯಕ್ಷರಾಗಿ (2000-2002), ಶೈಕ್ಷಣಿಕ ಮಂಡಳಿಯ ಸದಸ್ಯ (2004-2007 ಮತ್ತು 2021-2024)ರಾಗಿ ಕಾರ್ಯನಿರ್ವಹಿಸಿದ್ದರು.
ಸುದೀರ್ಘ ಕಾಲದ ರಾಜಕೀಯ ಅನುಭವ ಹೊಂದಿರುವ ಹರೀಶ್ ಕುಮಾರ್ ಅವರಿಗೆ 2004ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2017ರಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ 2018-2024ರ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಕೃಷಿ ವಲಯದಲ್ಲೂ ಅಪಾರ ಕೆಲಸ ಮಾಡಿರುವ ಕೆ.ಹರೀಶ್ ಕುಮಾರ್ ಅವರು, 1987-1992 ಮತ್ತು 2008-2013ರ ಅವಧಿಯಲ್ಲಿ ಬೆಳ್ತಂಗಡಿ ಕೃಷಿ ಸಹಕಾರ ಸಂಘಕ್ಕೆ ಆಯ್ಕೆಯಾಗಿದ್ದರು. ಬೆಳ್ತಂಗಡಿ ಸಹಕಾರ ಕೃಷಿ ಸಂಘದ ಅಧ್ಯಕ್ಷರಾಗಿಯೂ (2008-2011) ಸೇವೆ ಸಲ್ಲಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


