Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸಹಕಾರಿ ಸಂಸ್ಥೆಯಿಂದ ಕ್ಯಾ.ಪ್ರಾಂಜಲ್ ಸ್ಮರಣಾoಜಲಿ, 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ವೀಲ್ ಚೇರ್ ಕೊಡುಗೆ
    News

    ಶ್ರೀಶಾ ಸೌಹಾರ್ದ ಸಹಕಾರಿ ಸಂಸ್ಥೆಯಿಂದ ಕ್ಯಾ.ಪ್ರಾಂಜಲ್ ಸ್ಮರಣಾoಜಲಿ, 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ವೀಲ್ ಚೇರ್ ಕೊಡುಗೆ

    adminBy adminSeptember 28, 2025

    ಸಮಾಜಕ್ಕಾಗಿ ದುಡಿಯುವ, ದೇಶಸೇವೆ ಮಾಡುವ ಮನೋಭಾವವಿದ್ದರೆ ಅದುವೇ ಮಹಾನ್ ಸೇವೆ: ಪ್ರಾಂಜಲ್ ತಂದೆ ಎಂ ವೆಂಕಟೇಶ್ ಅಭಿಪ್ರಾಯ

    ಮಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷಗಳು ಆಗಿರುವ ಶುಭ ಸಂದರ್ಭದಲ್ಲಿ ಮಂಗಳೂರಿನ ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿಭಿನ್ನ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಯಿತು. ವಿಶೇಷ ಕಾರ್ಯಕ್ರಮದ ಅಂಗವಾಗಿ ದೇಶಸೇವೆಯ ಕೈಂಕರ್ಯದಲ್ಲಿ ವೀರಮರಣವನ್ನಪ್ಪಿದ ಕ್ಯಾ.ಪ್ರಾಂಜಲ್ ಅವರ ಸ್ಮರಣೆಗಾಗಿ ಪ್ರಾಂಜಲ್ ಸ್ಮರಣಾoಜಲಿ ಹಮ್ಮಿಕೊಳ್ಳಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಇದೇ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ 25 ಜನರಿಗೆ ವೀಲ್ ಚೇರ್‌ಗಳನ್ನು, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ 25 ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಗ್ರಂಥಾಲಯಗಳಿಗೆ ತಲಾ 100 ಪುಸ್ತಕಗಳ ವಿತರಣೆಯೂ ನಡೆಯಿತು.
    ಪ್ರಾಂಜಲ್ ಅವರ ತಂದೆ ಎಂಆರ್‌ಪಿಎಲ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್ ಮಾತನಾಡಿ, ನಮ್ಮ ಮಗನ ಮೂಲಕ ಸೈನ್ಯದ ಸೇವೆಯ ಕಾರ್ಯ ಮಾಡುವ ನಮ್ಮ ಕನಸುಗಳು ನೆರವೇರಿದೆ. ಬಹುಮುಖ್ಯವಾಗಿ ನಾವು ಸೈನಿಕರಲ್ಲವಾದರೂ ಸಮಾಜಕ್ಕಾಗಿ ದುಡಿಯುವ, ದೇಶಕ್ಕೆ ಸ್ಪಂದಿಸುವ ಮನೋಭಾವ ನಮ್ಮಲ್ಲಿ ಇದ್ದರೆ ಅದುವೇ ಮಹಾನ್ ಕಾರ್ಯವಾಗುತ್ತದೆ. ಸೈನಿಕರು ದೇಶಸೇವೆಗೆ ತಮ್ಮ ಜೀವವನ್ನೇ ಮುಡಿಪಾಗಿಡುತ್ತಾರೆ ಎಂಬ ಅರಿವು ನಮ್ಮಲ್ಲಿ ಇರಬೇಕು ಎಂದು ಹೇಳಿದರು.


    ದೇಶ ಮೊದಲು ಎಂಬುದನ್ನು ಸೈನಿಕ ನಿರೀಕ್ಷಿಸುತ್ತಾನೆ. ನನ್ನ ಮಗ ಪ್ರಾಂಜಲ್ ಹುಟ್ಟಿದ್ದು ಬೆಂಗಳೂರಿನಳ್ಳಿ ಆದರೂ ಬೆಳೆದದ್ದು ಮಂಗಳೂರಿನಲ್ಲಿ. ಚಿಕ್ಕಂದಿನಲ್ಲಿಯೇ ಮಿಲಿಟರಿ ಸೇರಬೇಕು ಎಂಬ ಆಸೆ ಅವನಿಗೆ ಇತ್ತು. ನಾವು ಸೈನಿಕ ಪರಂಪರೆಯವರು ಅಲ್ಲ. ಆದರೆ, ಆತ ನೋಡಿದ ಸಮಾಜ, ಶಿಕ್ಷಕರ ಕಾರಣದಿಂದ ಸೈನ್ಯ ಸೇರಲು ಪ್ರೇರಣೆ ಬೆಳೆಯಲು ಕಾರಣವಾಯಿತು ಎಂದರು.
    ಯಾವುದೇ ಯುದ್ದದ ಸಂದರ್ಭದಲ್ಲಿ ವಿವಿಧ ಶಸ್ತ್ರಾಸ್ತ್ರ, ಪರಿಕರಗಳನ್ನು ಹಣ ಕೊಟ್ಟು ಖರೀದಿ ಮಾಡಬಹುದು. ಆದರೆ ಸೈನಿಕನನ್ನು ಖರೀದಿಸಲು ಸಾಧ್ಯವಿಲ್ಲ. ಸನಾತನ ಧರ್ಮ ಪ್ರೇರಣೆಯ ಕಾರ್ಯಗಳು ನಿರಂತರವಾಗಿ ನಡೆಯುವ ಸಂದರ್ಭದಲ್ಲಿ ಪ್ರಾಂಜಲ್‌ನಂತಹ ಸೈನಿಕರು ಇದ್ದೇ ಇರುತ್ತಾರೆ ಎಂದರು.
    ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಮಾತನಾಡಿ, ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ವ್ಯವಹಾರ ಕ್ಷೇತ್ರದ ಜತೆಗೆ ಸಮಾಜಕ್ಕಾಗಿ ಸ್ಪಂದಿಸುವ ಕಾರ್ಯ ನಡೆಸುತ್ತಿರುವುದು ಅಭಿನಂದನೀಯ ಎಂದರು.
    ಶಾರದಾ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ, ನಿರ್ದೇಶಕರಾದ ಮಂಜುನಾಥ ಎಸ್.ಕೆ., ಭಾರತಿ ಜಿ.ಭಟ್ ಮುಖ್ಯ ಅತಿಥಿಗಳಾಗಿದ್ದರು.
    ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್, ಉಪಾಧ್ಯಕ್ಷ ಉದಯ ವಿ.ಶಾಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Captain Pranjal M S Gururaj Ramakrishna Mata Shreesha Shreesha Souharda Co Operative Society Swamy Jithakamananda Wheelchair
    Previous Articleಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ವಾರ್ಷಿಕ ಮಹಾಸಭೆ
    Next Article ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶೇ.20 ಡಿವಿಡೆಂಡ್

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.