Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಸೇವಾ ಸಹಕಾರಿ ಸಂಘದ 17ನೇ ಆಲಂಕಾರು ಶಾಖೆ ನಾಳೆ ಉದ್ಘಾಟನೆ
    News

    ಸಮಾಜ ಸೇವಾ ಸಹಕಾರಿ ಸಂಘದ 17ನೇ ಆಲಂಕಾರು ಶಾಖೆ ನಾಳೆ ಉದ್ಘಾಟನೆ

    adminBy adminOctober 4, 2025

    ಬಂಟ್ವಾಳ: ಸ್ವಾತಂತ್ರ್ಯ ಯೋಧ, ಸಮಾಜರತ್ನ ಡಾ|ಅಮ್ಮೆಂಬಳ ಬಾಳಪ್ಪರವರ ನೇತೃತ್ವ ಹಾಗೂ ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ 1981ರಲ್ಲಿ ಬಂಟ್ವಾಳದಲ್ಲಿ ಸ್ಥಾಪನೆಯಾದ ಸಮಾಜ ಸೇವಾ ಸಹಕಾರಿ ಸಂಘದ ಹದಿನೇಳನೇ ಶಾಖೆಯು ಕಡಬ ತಾಲೂಕಿನ ಆಲಂಕಾರಿನಲ್ಲಿ ಅಕ್ಟೋಬರ್‌ 5ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಆಲಂಕಾರಿನ ಮಾತೃಕೃಪಾ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ|ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟನೆ ಮಾಡಲಿದ್ದಾರೆ. ಸಮಾಜ ಸೇವಾ ಸಹಕಾರಿ ಸಂಘ ನಿ ಇದರ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.


    ಮುಖ್ಯ ಅತಿಥಿಗಳಾಗಿ ಕುಲಾಲ ಸಂಘ ಬೆಂಗಳೂರು ಅಧ್ಯಕ್ಷ ದಿವಾಕರ ಮೂಲ್ಯ, ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲಾ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಭಟ್ ಯು., ಲ್ಯಾಂಪ್ಸ್ ಸಹಕಾರ ಸಂಘ ನಿ. ಪುತ್ತೂರು ಇದರ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಪೂವಪ್ಪ ನಾಯ್ಕ ಎಸ್, ವಕೀಲರ ಸಂಘ, ಪುತ್ತೂರು ಇದರ ಕೋಶಾಧಿಕಾರಿ ಮಹೇಶ್ ಸವಣೂರು, ದ.ಕ. ಜಿಲ್ಲಾ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಪೀರ್ ಮೊಹಮ್ಮದ್ ಸಾಹೇಬ್, ಆಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಪೂಜಾರಿ, ಆಲಂಕಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸುಜಾತ ಕೆ, ಆಲಂಕಾರು ಶತಾಕ್ಷಿ ಕ್ಲಿನಿಕ್‌ನ ಡಾ| ಕೃತಿ ಶೆಟ್ಟಿ, ಶಾಖಾ ಕಟ್ಟಡ ಮಾಲೀಕರಾದ ಕುಶಾಲಪ್ಪ ಗೌಡ ಸುರುಳಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಜನಾರ್ಧನ ಬೊಂಡಾಲ, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ, ಶಾಖಾ ವ್ಯವಸ್ಥಾಪಕರು ಉಷಾ, ಆಡಳಿತ ಮಂಡಳಿ ಸದಸ್ಯರಾದ ರಮೇಶ್ ಸಾಲ್ಯಾನ್, ಅರುಣ್ ಕುಮಾರ್ ಕೆ., ಸತೀಶ್, ಬಿ.ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಭೋಜ ಸಾಲಿಯಾನ್, ಕಿರಣ್ ಕುಮಾರ್ ಎ., ಹರೀಶ್, ಪ್ರೇಮನಾಥ ಬಂಟ್ವಾಳ್, ವಿದ್ಯಾ, ಮಾಲತಿ ಮಚ್ಚೇಂದ್ರ, ಜಗನ್ನಿವಾಸ ಗೌಡ, ಗಣೇಶ್ ಸಮಗಾರ, ರೇಖಾ ನಾಯಕ್ ಹಾಗೂ ನೌಕರ ವೃಂದದವರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Alankaru Ammembala Balappa Bantwala Samaja Seva Sahajkari Bank Hoovayya Moolya
    Previous Articleಸಹಕಾರಿ ಉದ್ಯೋಗಿಗೆ ಒಲಿದ 2021ನೇ ಸಾಲಿನ ಉತ್ತಮ ಛಾಯಾಗ್ರಹಣ ರಾಜ್ಯ ಚಲನಚಿತ್ರ ಪ್ರಶಸ್ತಿ
    Next Article ಸಹಕಾರಿ ಸಂಘಗಳಿಂದ ಜನರ ನಾಡಿಮಿಡಿತ ಅರಿತು ಕೆಲಸ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.