Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆ ಉದ್ಘಾಟನೆ
    News

    ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆ ಉದ್ಘಾಟನೆ

    adminBy adminOctober 8, 2025

    ಬೆಳ್ತಂಗಡಿ: ಮಂಗಳೂರಿನ ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಬೆಳ್ತಂಗಡಿ ಚರ್ಚ್‌ ಬಳಿಯ ನೊರೋನಾ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗೆ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಲಕ್ಷ್ಮಣ್‌ ಕರಾವಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯು ಕಳೆದ ಮೂವತ್ತು ವರ್ಷಗಳಿಂದ ಉತ್ತಮವಾಗಿ ಪ್ರಗತಿ ಕಂಡಿದ್ದು ಸೊಸೈಟಿಯ ಶಾಖೆಗಳ ವಿಸ್ತರಣೆಗೆ ಯೋಜನೆ ಹಮ್ಮಿಕೊಳ್ಳಬೇಕು. ಪ್ರತಿ ಎರಡು ವರ್ಷಕ್ಕೊಮ್ಮೆ ಒಂದು ಶಾಖೆಯಂತೆ ಹತ್ತರಿಂದ ಹದಿನೈದು ಶಾಖೆಗಳು ಶೀಘ್ರ ಆಗಬೇಕಿದೆ. ಬೆಳ್ತಂಗಡಿಯಲ್ಲಿ ಆರಂಭಗೊಂಡ ಶಾಖೆ ಕೋಟಿ ರೂ.ಗೂ ಹೆಚ್ಚು ವ್ಯವಹಾರ ನಡೆಸಿ ಪ್ರಗತಿಪಥದಲ್ಲಿ ಸಾಗುವಂತಾಗಲಿ ಎಂದು ಶುಭ ಹಾರೈಸಿದರು.
    ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್‌ ಕೆ ಅಧ್ಯಕ್ಷತೆ ವಹಿಸಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಂಪ್ಯೂಟರೀಕರಣ ವ್ಯವಸ್ಥೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ ಪ್ರಥಮ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್‌ ಭಂಡಾರಿ, ನೊರೋನಾ ಕಾಂಪ್ಲೆಕ್ಸ್‌ನ ಮಾಲೀಕರಾದ ಜೋಕಿಮ್‌ ನೊರೋನಾ, ಬೆಳ್ತಂಗಡಿ ಭಂಡಾರಿ ಸಮಾಜದ ಮಾಜಿ ಅಧ್ಯಕ್ಷರಾದ ಎ.ಪೂವಪ್ಪ ಭಂಡಾರಿ ಪಣೆಜಾಲು, ಕೇಶವ ಭಂಡಾರಿ, ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ವಿಶ್ವನಾಥ ಭಂಡಾರಿ, ಬೆಳ್ತಂಗಡಿ ಸವಿತಾ ಸಮಾಜದ ಉಪಾಧ್ಯಕ್ಷ ಜಿ.ಎಸ್‌ ಪೂವಪ್ಪ ಭಂಡಾರಿ ಮದ್ದಡ್ಕ, ಜೇಸಿ ವಲಯ ನಿರ್ದೇಶಕ ಅಶೋಕ್‌ ಗುಂಡಯ, ನಾರಾವಿ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಉಪಸ್ಥಿತರಿದ್ದರು.


    ಸೊಸೈಟಿಯ ಉಪಾಧ್ಯಕ್ಷರಾದ ರಾಮ ಭಂಡಾರಿ ಎಚ್‌., ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ., ನಿರ್ದೇಶಕರಾದ ರಘುವೀರ ಭಂಡಾರಿ, ಶಶಿಧರ ಭಂಡಾರಿ ಕಾರ್ಕಳ, ಬಿ.ಎಸ್‌ ಭಂಡಾರಿ, ಶೇಖರ್‌ ಎಚ್‌., ಕುಮಾರ್‌ ಭಂಡಾರಿ, ಅಶೋಕ್‌ ಜಿ., ದಿವಾಕರ ಶಂಭೂರ್‌, ರಮೇಶ್‌ ಭಂಡಾರಿ ಸಿ.ಎಂ, ಹರೀಶ್‌ ಭಂಡಾರಿ, ರಮಾನಾಥ ಭಂಡಾರಿ, ರವೀಂದ್ರನಾಥ್‌ ಉಳ್ಳಾಲ್‌, ಶಾಂತಾ ಬಿ.ಎಸ್‌, ರಾಜಾ ಬಂಟ್ವಾಳ, ಶಶಿಕಲಾ ಉಪಸ್ಥಿತರಿದ್ದರು. ಸತೀಶ್‌ ಭಂಡಾರಿ ನಾಳ ಪ್ರಾರ್ಥಿಸಿ, ರಾಜಾ ಬಂಟ್ವಾಳ ಸ್ವಾಗತಿಸಿದರು. ಸಿಇಒ ಪದ್ಮನಾಭ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಾಧರ ಭಂಡಾರಿ ಕಾಯರ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Chandrashekhar M Kacchuru Credit Co Operative Society Kacchuru Shree Nageshwara Temple Seva Trust Noronha Complex Beltangady Padmanabha M
    Previous Articleಆತ್ಮಶಕ್ತಿ ಸಹಕಾರಿ ಸಂಘ ವತಿಯಿಂದ ಕಿನ್ಯಾದಲ್ಲಿ ಉಚಿತ ವೈದ್ಯಕೀಯ ಶಿಬಿರ
    Next Article ಕಾರವಾರ ಅರ್ಬನ್‌ ಬ್ಯಾಂಕ್‌ಗೆ ಲಿಕ್ವಿಡೇಟರ್‌ ನೇಮಕ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.