ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 18ನೇ ನೂತನ ಶಾಖೆ ಅಕ್ಟೋಬರ್ 22ರಂದು ಕಡಬದ ಸಂತೆಕಟ್ಟೆ ಮುಖ್ಯರಸ್ತೆಯ ಚಾಚಾ ಕಾಂಪ್ಲೆಕ್ಸ್‌ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ತಾಳ್ತಜೆ ವಸಂತ ಕುಮಾರ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾದ ಭಾಸ್ಕರ ಎಂ.ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ಪಟ್ಟಣ ಪಂಚಾಯತ್ ಸದಸ್ಯರಾದ ಗುಣವತಿ ರಘುರಾಮ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ತಮನ್ನ ಜಬೀನ್, ಕಡಬ ಪಟ್ಟಣ ಪಂಚಾಯತ್ ಸದಸ್ಯ ಕೆ.ಎಂ ಹನೀಫ್, ಕಟ್ಟಡದ ಮಾಲೀಕರೂ,ಕಡಬ ಪಟ್ಟಣ ಪಂಚಾಯತ್ ಸದಸ್ಯರೂ ಆದ ಸೈಮಾನ್, ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಕೆ.ಎಸ್, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಲಸ್ತ್ಯಾ ರೈ, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಪಿ ವರ್ಗೀಸ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ, ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಆಳ್ವ ಬೋಲೋಡಿ, ವಕೀಲರಾದ ಉದಯ ಬಿ.ಕೆ, ಮಹೇಶ್ ಕೆ.ಸವಣೂರು, ಪುತ್ತೂರಿನ ಎಸ್.ಆರ್ ಬಿಲ್ಡರ್ಸ್ & ಡೆವಲಪರ್ಸ್‌ನ ಶಿವಪ್ರಸಾದ್ ಇಜ್ಜಾವು, ಟೀಮ್ ವರ್ಕ್ ಪುತ್ತೂರಿನ ರಂಜಿತ್ ಕೆ.ಬಂಗೇರ ಭಾಗವಹಿಸಲಿದ್ದಾರೆ.

ಸಂಘದ ಉಪಾಧ್ಯಕ್ಷರಾದ ದಾಮೋದರ ಕುಲಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜನಾರ್ದನ ಮೂಲ್ಯ, ಶಾಖಾ ವ್ಯವಸ್ಥಾಪಕ ಗಣೇಶ್ ಮೂಲ್ಯ ಟಿ., ನಿರ್ದೇಶಕರಾದ ಬಿ.ಎಸ್ ಕುಲಾಲ್, ಗಣೇಶ್ ಪಿ., ಪದ್ಮಕುಮಾರ್ ಎಚ್., ಪೂವಪ್ಪ ಕಡಂಬಾರು, ಸೇಸಪ್ಪ ಕುಲಾಲ್, ಪ್ರಶಾಂತ್ ಬಂಜನ್, ನಾಗೇಶ್ ಕುಲಾಲ್, ರೇಖಾ ದಿನೇಶ್, ರಂಜಿತಾ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com













