Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸ್ಟೇಟ್‌ಬ್ಯಾಂಕ್ ಶಾಖೆಯ ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸ್ಟೇಟ್‌ಬ್ಯಾಂಕ್ ಶಾಖೆಯ ಗ್ರಾಹಕರ ಸಭೆ

    adminBy adminOctober 23, 2025

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರುಗಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಂಘದ ಸದಸ್ಯರಾದ ರೊನಾಲ್ಡ್ ಜೋಸೆಫ್ ಸಲ್ದಾನ್ಹ, ರಂಜಿತ್ ಎಂ. ಹಾಗೂ ಜವಹಾರ್ ಲಾಲ್ ವಿಠಲ್‌ಜೀ ದೀಪ ಪ್ರಜ್ವಲನೆ ಮಾಡಿ ಸಭೆಯನ್ನು ಉದ್ಘಾಟಿಸಿದರು. ರೊನಾಲ್ಡ್ ಜೋಸೆಫ್ ಸಲ್ದಾನ್ಹ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ. ಒಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಇನ್ನೊಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್. ಸಂಘವು ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯೇ ಸಂಘವು ಇವತ್ತು ಈ ಮಟ್ಟಕ್ಕೆ ಬೆಳೆಯಲು ಮುಖ್ಯ ಕಾರಣ ಎಂದು ಹೇಳಿದರು. ಸಂಘದ ಸದಸ್ಯ ಕೃಷ್ಣಪ್ಪ ಪೂಜಾರಿ ಎಂ ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಬೋಳಾರದಲ್ಲಿ ನೂತನ ಶಾಖೆ ತೆರೆಯುವಂತೆ ವಿನಂತಿಸಿದರು. ಸದಸ್ಯ ರಂಜಿತ್ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಇ ಸ್ಟ್ಯಾಂಪಿಂಗ್‌ ಸೇವೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ. ಇದರಲ್ಲಿ ಸಂಘದ ಸಿಬ್ಬಂದಿಗಳ ಪಾತ್ರವೂ ಅತ್ಯುತ್ತಮವಾಗಿರುವುದರಿಂದ ಸಂಘವು ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು.


    ಸಂಘದ ಸದಸ್ಯರಾದ ರಾಜಾರಾಮ್ ಎ, ಮ್ಯಾಕ್ಸಿಮ್ ಗೊನ್ಸಾಲ್ವಿಸ್, ಸಿ.ಹೆಚ್ ಪದ್ಮನಾಭ ಶೆಟ್ಟಿ, ಅಬುಬಕ್ಕರ್ ಯೂಸುಫ್ ನಗರ್ ಎಸ್, ಪ್ರಮೋದ್ ಕುಮಾರ್ ಸುವರ್ಣ ಜೆ, ಹಾಗೂ ಪ್ರೇಮಲತಾ ಕೆ. ಅಮೀನ್ ಶುಭ ಹಾರೈಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯು ದಶಕದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಈ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಪ್ರತಿ ಗ್ರಾಂ ಗೆ ರೂ. 10,500 ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡುತ್ತಿದ್ದೇವೆ. ಸಂಘದ ಎಲ್ಲಾ ಶಾಖೆಯಲ್ಲಿ ಇ-ಸ್ಟ್ಯಾಂಪ್‌ ಸೌಲಭ್ಯ ನೀಡಲಾಗುತ್ತಿದೆ. ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಇ-ಸ್ಟ್ಯಾಂಪ್‌ ಸೇವೆಯು ಸಂಜೆ 7 ಗಂಟೆಯವರೆಗೆ ಲಭ್ಯವಿದ್ದು, ಗ್ರಾಹಕರ ಸಂಖ್ಯೆ ಅಧಿಕ ಇದ್ದು ಇಲ್ಲಿ ಸ್ಥಳವಾಕಾಶದ ಕೊರತೆ ಇರುವುದರಿಂದ ಮುಂದಿನ ದಿನಗಳಲ್ಲಿ ಈ ಶಾಖೆಯನ್ನು ಮಂಗಳೂರಿನ ಬಂದರು ಸ್ಥಳಕ್ಕೆ ಸ್ಥಳಾಂತರಗೊಳಿಸುವ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರು.
    ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನೂ ಗ್ರಾಹಕರಿಗೆ ನೀಡುತ್ತಿದೆ. ಸದಸ್ಯರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರುತ್ತಿದೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸುತ್ತಿದೆ. ಸಂಘದ ಗಂಜಿಮಠ ಶಾಖೆಯು ಅಕ್ಟೋಬರ್ 24ರಂದು ಗಂಜಿಮಠ ಗ್ರಾಮ ಪಂಚಾಯತಿ ಕಟ್ಟಡದಿಂದ ಗಂಜಿಮಠ ಮುಖ್ಯರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್‌ನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
    ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ರಮಾನಾಥ ಸನಿಲ್, ಗೋಪಾಲ್ ಎಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ಸಿಬ್ಬಂದಿ ರತಿಕಾ ಸ್ವಾಗತಿಸಿ, ಅನುಜಿತ ವಂದಿಸಿದರು. ಶಾಖಾಧಿಕಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com



    Atmashakthi Vividhoddesha Sahakari Sangha Chittaranjan Bolar DC Office Grahakara Sabhe Statebank
    Previous Articleಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 18ನೇ ಶಾಖೆ ಕಡಬದಲ್ಲಿ ನಾಳೆ ಉದ್ಘಾಟನೆ
    Next Article ದೀಪಾವಳಿ ಕೇವಲ ಬೆಳಕಿನ ಹಬ್ಬವಲ್ಲ, ಏಕತೆ, ಕೃತಜ್ಞತೆ, ನವೀಕರಣದ ಆಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.