Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಸಮಾರಂಭ
    News

    ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಸಮಾರಂಭ

    adminBy adminOctober 23, 2025

    ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ ನ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳ್ಳಲಿದೆ. ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30.01.2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ.
    ಅಲ್ಪಾವಧಿಯಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
    ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ.95 ಮಹಿಳಾ ಸಿಬ್ಬಂದಿಗಳಿ0ದ ಗ್ರಾಹಕರಿಗೆ ಅತ್ಯುತ್ತಮ ಸೇವೆಯೊಂದಿಗೆ ನಿರಂತರ ಲಾಭ ಗಳಿಸುತ್ತ ಮುಂದುವರಿದಿದ್ದು ವಾರ್ಷಿಕ ರೂ. 2000 ಕೋಟಿಗೂ ಮೀರಿ ವ್ಯವಹಾರದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮಾತ್ರವಲ್ಲದೇ ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸಿ, 50 ಶಾಖೆಗಳನ್ನು ಹೊಂದುವ ಯೋಜನೆಯನ್ನು ಹಮ್ಮಿಕೊಂಡಿದೆ.


    ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 10,500/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    ATM Atmashakthi Vividhoddesha Sahakari Sangha Vaikunta Prabhu Complex Main Road Ganjimata
    Previous Articleನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಸಮಾರಂಭ
    Next Article ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 24ನೇ ಶಾಖೆ ಕಲ್ಲಡ್ಕದಲ್ಲಿ ನಾಳೆ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.