ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ ಬೆರ್ನಾಡ್ ಶ್ಲಾಘನೆ

ಮೂಲ್ಕಿ: ಹಳೆಯಂಗಡಿಯ ಪ್ರತಿಷ್ಠಿತ ಪೂಜಾ ಫ್ರೆಂಡ್ಸ್ ತಂಡವು ಉಚಿತ ಸೇವೆ ಮೂಲಕ ಜೀವರಕ್ಷಕರಾಗಿ, ಅಸಹಾಯಕರಿಗೆ ಸಹಾಯಹಸ್ತ ನೀಡುವುದು ಇಂಥ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿರುವುದು ಅಭಿನಂದನೀಯವಾಗಿದ್ದು ಇಂಥ ಸಮಾಜಮುಖಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ಹೇಳಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಅವರು ಹಳೆಯಂಗಡಿಯ ಪೂಜಾ ಫ್ರೆಂಡ್ಸ್ ಮತ್ತು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಾಗೂ ಇತರೆ ಸಂಸ್ಥೆಗಳ ಸಹಕಾರದಿಂದ ಉಚಿತ ಸೇವೆಯ ಮೂರನೇ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ನೂತನ ಆಂಬುಲೆನ್ಸ್ ಲೋಕಾರ್ಪಣೆ ಮಾಡಿದರು. ಪೂಜಾ ಫ್ರೆಂಡ್ಸ್ ಗೌರವಾಧ್ಯಕ್ಷ ಜಯಕೃಷ್ಣ ಕೋಟ್ಯಾನ್ ಮಾತನಾಡಿ ಪೂಜಾ ಫ್ರೆಂಡ್ಸ್ ತಂಡದ 10 ವರ್ಷದ ಸಾಧನೆಯಲ್ಲಿ ಪರಿಸರದ ಜನ ಉತ್ತಮ ಸಹಕಾರ ನೀಡಿದ್ದು ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳು ನಿರಂತರವಾಗಿ ನಡೆಯಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಜನಪದ ವಿದ್ವಾಂಸ ಹಾಗೂ ಸೊಸೈಟಿ ನಿರ್ದೇಶಕರಾದ ಡಾ.ಗಣೇಶ್ ಅಮೀನ್ ಸಂಕಮಾರ್, ಪಂಚಾಯತ್ ಸದಸ್ಯರಾದ ವಿನೋದ್, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ಅನಿಲ್ ಸಸಿಹಿತ್ಲು, ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ನಾಣಿಲ್, ಪಿಸಿಎ ಬ್ಯಾಂಕ್ ನಿರ್ದೇಶಕ ಧರ್ಮಾನಂದ ಶೆಟ್ಟಿಗಾರ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಲಯನ್ ರಾಕೇಶ್ ಸಾಲ್ಯಾನ್, ಯಾದವ ದೇವಾಡಿಗ, ಮೋಹನ್ ಸುವರ್ಣ, ಮಿಥುನ್ ಸುವರ್ಣ, ಸಂದೀಪ್ ಆಚಾರ್ಯ, ರೋಷನ್ ಬೆಳ್ಚಡ, ಕೃಷ್ಣ ಪೂಜಾರಿ ಎನ್ಐಟಿಕೆ., ಜೀವನ್ ಪ್ರಕಾಶ್ ಕಾಮೆರೊಟ್ಟು, ಪೂಜಾ ಫ್ರೆಂಡ್ಸ್‌ನ ಅಧ್ಯಕ್ಷ ಪ್ರಜೀತ್, ಹಳೆಯಂಗಡಿ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ರೋಹಿತ್ ಚೇಳಾಯರು ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


