Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿ ಸಂಘದ ಸಿಬ್ಬಂದಿಯಿಂದ ಉತ್ತಮ ಸೇವೆ
    News

    ಆತ್ಮಶಕ್ತಿ ಸಹಕಾರಿ ಸಂಘದ ಸಿಬ್ಬಂದಿಯಿಂದ ಉತ್ತಮ ಸೇವೆ

    adminBy adminOctober 30, 2025

    ಮುಡಿಪು ಶಾಖೆಯ ಗ್ರಾಹಕರ ಸಭೆಯಲ್ಲಿ ನವೀನ್‌ಚಂದ್ರ ಶ್ಲಾಘನೆ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಂಘದ ಸದಸ್ಯರಾದ ನವೀನ್‌ಚಂದ್ರ ಶ್ಲಾಘಿಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಹಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಗ್ರಾಹಕರ ಸಭೆಯನ್ನು ಸಂಘದ ಸದಸ್ಯರಾದ ನವೀನ್‌ಚಂದ್ರ, ಕಾಶೀಮ್ ಕೆ, ಕ್ಯಾತರಿನ್ ಡಿಸೋಜ ಹಾಗೂ ದುಶ್ಯಂತ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಕಾಸಿಮ್ ಕೆ ಮಾತನಾಡಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು.


    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಮುಡಿಪು ಶಾಖೆಯು ಒಂಬತ್ತನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಖೆಯ ಪ್ರಗತಿಗೆ ಕಾರಣರಾದ ಎಲ್ಲಾ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ ರೂ. ೧೦,೫೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಜೀವವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದ್ದು, ಗ್ರಾಹಕರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯ ನೀಡುತ್ತಿದ್ದೇವೆ. ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರ ಆಯೋಜಿಸಿಕೊಂಡು ಬರುತ್ತಿದ್ದೇವೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ಒಳ್ಳೆಯ ಅಂಕ ಬಂದಾಗ ವಿದ್ಯಾರ್ಥಿವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
    ಸಂಘದ ಮುಡಿಪು ಶಾಖೆಯ ಶಾಖಾಧಿಕಾರಿ ನಿಶ್ಮಿತಾ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಸಿಬ್ಬಂದಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Vividhoddesha Sahakari Sangha Mudipu Branch
    Previous Articleಅಡಕೆ ನಿಷೇಧದ ತೂಗುಗತ್ತಿ, ಆತಂಕ ನಿವಾರಣೆಗೆ ಯತ್ನ
    Next Article ಸಹಕಾರ ಕಾಯ್ದೆಗೆ ಸಮಗ್ರ ತಿದ್ದುಪಡಿಯ ಹೈಕೋರ್ಟ್ ಆದೇಶ ಸ್ವಾಗತಾರ್ಹ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.