Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರಿನಲ್ಲಿ ನವಂಬರ್‌ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ
    News

    ಮಂಗಳೂರಿನಲ್ಲಿ ನವಂಬರ್‌ 16ರಂದು ರಾಜ್ಯಮಟ್ಟದ ಸಹಕಾರ ಸಪ್ತಾಹ

    adminBy adminOctober 31, 2025

    ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ವಿಷಯದಲ್ಲಿ ಕಾರ್ಯಕ್ರಮ: ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾಹಿತಿ

    ಮಂಗಳೂರು: ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸ ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯ ಇರಿಸಿಕೊಂಡು ಹಲವಾರು ಯೋಜನೆಗಳನ್ನು ರೂಪಿಸಿದ್ದರ ದ್ಯೋತಕವಾಗಿ ಪ್ರತಿವರ್ಷ ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ “ಅಖಿಲ ಭಾರತ ಸಹಕಾರ ಸಪ್ತಾಹ” ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಮಂಗಳೂರಿನಲ್ಲಿ ನವೆಂಬರ್‌ 16ರಂದು ಭಾನುವಾರ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ವಿಷಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಪಂಡಿತ್ ನೆಹರೂರವರ ಜನ್ಮದಿನವಾದ ನವೆಂಬರ್ 14ರಂದು ಸಪ್ತಾಹದ ಉದ್ಘಾಟನೆ ರಾಜ್ಯಮಟ್ಟದಲ್ಲಿ ನಡೆಯಲಿದೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಇದೇ ರೀತಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ನಮ್ಮ ಉಭಯ ಜಿಲ್ಲೆಗಳಲ್ಲೂ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ.


    ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನವಂಬರ್‌ 16ರ ಭಾನುವಾರ ಕಾರ್ಯಕ್ರಮ ನಿಗದಿಯಾಗಿದ್ದು, ಸಪ್ತಾಹದ ಅವಧಿಯಲ್ಲಿ ಸಹಕಾರ ಚಳುವಳಿ ನಡೆದು ಬಂದ ಹಾದಿಯ ಅವಲೋಕನ ನಡೆಸಿ ಭವಿಷ್ಯದ ಸಹಕಾರಿ ಚಳವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚಿಂತನೆ ನಡೆಸುವುದೇ ಸಹಕಾರಿ ಸಪ್ತಾಹದ ಮುಖ್ಯ ಉದ್ದೇಶವಾಗಿದೆ.
    ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.


    ರಾಜ್ಯಮಟ್ಟದ ಸಹಕಾರ ಸಪ್ತಾಹ ಆಚರಣೆಯ ಸಮಾರಂಭವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ನೀಡಲಿದ್ದಾರೆ. ಉತ್ತಮ ಸ್ವ-ಸಹಾಯ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶಾಸಕ, ಜಿ.ಟಿ. ದೇವೇಗೌಡ ಇವರು ಪ್ರದಾನ ಮಾಡಲಿದ್ದಾರೆ. ವಸ್ತುಪ್ರದರ್ಶನ ಮಳಿಗೆಗಳನ್ನು ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ ಸಂಸದ ಬ್ರಿಜೇಶ್‌ ಚೌಟ ಸಹಕಾರ ಸಪ್ತಾಹದ ಧ್ವಜಾರೋಹಣ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್‌ ರಾಜೇಂದ್ರ ಕುಮಾರ್‌ ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ಶಾಸಕರಾದ ವೇದವ್ಯಾಸ್ ಡಿ.ಕಾಮತ್, ಡಾ| ಭರತ್ ಶೆಟ್ಟಿ ವೈ, ಯಶ್‌ಪಾಲ್ ಎ.ಸುವರ್ಣ ಭಾಗವಹಿಸಲಿದ್ದಾರೆ. ನಬಾರ್ಡ್‌ ಮುಖ್ಯ ಮಹಾಪ್ರಬಂಧಕರಾದ ಡಾ.ಸುರೇಂದ್ರ ಬಾಬು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ರವಿರಾಜ್‌ ಹೆಗ್ಡೆ ಇವರು ಗೌರವ ಉಪಸ್ಥಿತಿ ಇರಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎಸ್.ಬಿ.ಶೆಟ್ಟಣ್ಣನವರ್, ಕರ್ನಾಟಕ ರಾಜ್ಯದ ಸಹಕಾರ ಸಂಘಗಳ ನಿಬಂಧಕರಾದ ಟಿ.ಎಚ್.ಎಂ. ಕುಮಾರ್, ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿಯ ಹೊಸ ಉತ್ಪನ್ನಗಳ ಬಿಡುಗಡೆ ನಡೆಯಲಿದೆ ಎಂದು ರಾಜೇಂದ್ರ ಕುಮಾರ್‌ ತಿಳಿಸಿದರು.
    ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌ ನವೀನ್‌, ಸಹಕಾರ ಸಂಘಗಳ ಅಪರ ನಿಬಂಧಕ(ಪತ್ತು) ಎಚ್‌.ಬಾಲಶೇಖರ್‌, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಲಿಂಗರಾಜ್‌, ಸಹಕಾರ ಸಂಘಗಳ ಮೈಸೂರು ಪ್ರಾಂತ ಜಂಟಿ ನಿಬಂಧಕರಾದ ಪ್ರಸಾದ್‌ ರೆಡ್ಡಿ ಪಿ., ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್‌ ಎಚ್‌.ಎನ್‌., ಉಡುಪಿ ಜಿಲ್ಲಾ ಉಪನಿಬಂಧಕಿ ಲಾವಣ್ಯ ಕೆ.ಆರ್‌., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಕೆ.ಗೋಪಾಲಕೃಷ್ಣ ಭಟ್‌, ನವೋದಯ ಗ್ರಾಮವಿಕಾಸ ಚಾರಿಟೇಬಲ್‌ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.

    ಸಹಕಾರ ಮಾಣಿಕ್ಯ ಪ್ರಶಸ್ತಿ
    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ ಸಹಕಾರ ಮಾಣಿಕ್ಯ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಈ ಬಾರಿಯೂ ಸರ್ವಾಂಗೀಣ ಪ್ರಗತಿ ಸಾಧಿಸಿದ ಸಹಕಾರಿ ಸಂಘಗಳಿಗೆ “ಸಹಕಾರ ಮಾಣಿಕ್ಯʼʼ ಪ್ರಶಸ್ತಿಯ ಜೊತೆಗೆ 5 ಗ್ರಾಂ ಚಿನ್ನದ ಪದಕ, ರೂ.10,000 ನಗದು ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು ಎಂದು ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಮಾಹಿತಿ ನೀಡಿದರು.

    ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ
    ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು, ಮಹಿಳಾ ಸಹಕಾರಿ ಸಂಘಗಳು, ಮೀನುಗಾರಿಕಾ ಸಹಕಾರಿ ಸಂಘಗಳು, ಕ್ರೆಡಿಟ್ ಸೊಸೈಟಿಗಳು, ಸೌಹಾರ್ದ ಸಹಕಾರಿ ಸಂಘಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಹಕಾರ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ನವೋದಯ ಸ್ವ-ಸಹಾಯ ಗುಂಪುಗಳು ಬಡಜನರ ಆರ್ಥಿಕ ಶಕ್ತಿಯಾಗಿ ಕೆಲಸ ಮಾಡುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35,000 ಕ್ಕೂ ಅಧಿಕ ನವೋದಯ ಸ್ವ-ಸಹಾಯ ಗುಂಪುಗಳಿದ್ದು ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಅತ್ಯುತ್ತಮ ಸ್ವ-ಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು ಎಂದು ರಾಜೇಂದ್ರ ಕುಮಾರ್‌ ತಿಳಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dr.M.N.Rajendra Kumar Sahakara Manikya Sahakara Sapthaha SCDCC Bank
    Previous Articleಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘಕ್ಕೆ ಸುವರ್ಣ ಮಹೋತ್ಸವ ಸಂಭ್ರಮ
    Next Article 2023ರಿಂದ 29,000ಕ್ಕೂ ಹೆಚ್ಚು ಹೊಸ ಸಹಕಾರ ಸಂಘಗಳ ಸ್ಥಾಪನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.