ಮಂಗಳೂರು: ಎಸ್.ಕೆ ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಹಾಗೂ ವಜ್ರಮಹೋತ್ಸವದ ಸಮಾರೋಪ ಸಮಾರಂಭ ನವಂಬರ್ 9ರಂದು ಭಾನುವಾರ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿಶ್ವಸೌಧ ಕಟ್ಟಡ ನವೀಕರಣಗೊಂಡಿದ್ದು ಆಡಳಿತ ಕಚೇರಿಯ ಬಳಿ ನ.9ರಂದು ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಕಟಪಾಡಿ -ಪಡುಕುತ್ಯಾರು ವೇಣುಗಿರಿಯ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಮತ್ತು ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೆಮಾದನಹಳ್ಳಿ, ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು ಹಾಸನ ಇಲ್ಲಿನ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳವರು ದೀಪ ಪ್ವಜ್ವಲನ ಮಾಡಿ ಆಶೀರ್ವಚನ ನೀಡಲಿದ್ದಾರೆ. ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಎಸ್.ಕೆ ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಲಿಫ್ಟ್ ಉದ್ಘಾಟಿಸಲಿದ್ದಾರೆ. ನವೀಕೃತ ಆಡಳಿತ ಕಚೇರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಅವರು ನವೀಕೃತ ಕೊಟ್ಟಾರ ಚೌಕಿ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕೆನರಾ ಜ್ಯುವೆಲ್ಲರ್ಸ್‌ನ ಧನಂಜಯ ಪಾಲ್ಕೆ ಅವರು ಪಾಲ್ಕೆ ಬಾಬುರಾಯ ಆಚಾರ್ಯ ವೇದಿಕೆ ಉದ್ಘಾಟನೆ ಮಾಡಲಿದ್ದಾರೆ. ಅಯೋಧ್ಯೆಯ ಶ್ರೀ ರಾಮಲಲ್ಲಾ ವಿಗ್ರಹದ ನಿರ್ಮಾತೃ ಶಿಲ್ಪಿ ಡಾ.ಅರುಣ್ ಯೋಗಿರಾಜ್ ಅವರು ಪಾಲ್ಕೆ ಬಾಬುರಾಯ ಆಚಾರ್ಯ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತಾಧಿಕಾರಿ ಕೆ.ಉಮೇಶ್ ಆಚಾರ್ಯ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್ ಎಚ್.ಎನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಕೆ ಭಾಗವಹಿಸಲಿದ್ದಾರೆ.
ಬೆಳಗ್ಗೆ 9ರಿಂದ 10.30ರ ತನಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನೂತನ ವಿಶ್ವದಾಖಲೆ ಖ್ಯಾತಿಯ ವಿದ್ವಾನ್ ಯಶವಂತ ಎಂ.ಜಿ ಮತ್ತು ಬಳಗದವರಿಂದ ಭಾವ -ಭಕ್ತಿ ಗಾನಸುಧಾ, ಅಪರಾಹ್ನ 2ರಿಂದ 2.45ರವರೆಗೆ ದೇವಮಾನವ ಪಾಲ್ಕೆ ಬಾಬುರಾಯ ಆಚಾರ್ಯರ ಜೀವನ ಮೌಲ್ಯಗಳು ಎಂಬ ವಿಷಯದ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ಉಡುಪಿಯ ವಿಶ್ವಕರ್ಮ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಬಿ.ಎ ಆಚಾರ್ಯ ಮಣಿಪಾಲ ಮತ್ತು ವಿಶ್ವಕರ್ಮ ಕಲಾ ಪರಿಷತ್‌ನ ಅಧ್ಯಕ್ಷರಾದ ಡಾ.ಎಸ್.ಪಿ ಗುರುದಾಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಸಮನ್ವಯಕಾರರಾಗಿ ವಿಶ್ವಕರ್ಮಶ್ರೀ ಪ್ರಶಸ್ತಿ ಪುರಸ್ಕೃತ, ಎಸ್‌ಕೆಜಿಐ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯ ಭಾಗವಹಿಸಲಿದ್ದಾರೆ. 3ರಿಂದ ಸಾಯಂಕಾಲ 6ರ ತನಕ ಯಕ್ಷತೀರ್ಥ ಕಲಾಸೇವೆ ನೂರಾಳ್‌ಬೆಟ್ಟು ಇವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಾಟ್ಯವೈಭವ ನಡೆಯಲಿದೆ. ಆ ಬಳಿಕ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಎಸ್.ಕೆ ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್.ಪತ್ತಾರ್, ರೋಹಿಣಿ ಪಿ.ಎಂ, ಜ್ಯೋತಿ ಎಂ.ವಿ, ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com










