ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 20ನೇ ನೂತನ ಶಾಖೆ ಧರ್ಮಸ್ಥಳದಲ್ಲಿ ನವೆಂಬರ್ 13ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ನವೆಂಬರ್ 13ರ ಗುರುವಾರ ಬೆಳಿಗ್ಗೆ 10.30ಕ್ಕೆ ಅಂಚೆ ಕಚೇರಿ ಬಳಿಯ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗದ ಕಟ್ಟಡದ ಮೊದಲನೇ ಮಹಡಿಯಲ್ಲಿ ಶಾಖಾ ಕಛೇರಿ ಉದ್ಘಾಟನೆಯಾಗಲಿದೆ. ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೊರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಎಂ.ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್., ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ‘ನವಶಕ್ತಿ’, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

