ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು.
https://chat.whatsapp.com/JVAtKKe2M19AFO3W5629ZS?mode=ems_copy_t
ಸಂಘದ ಸದಸ್ಯರಾದ ಜಗದೀಶ್ ಸನಿಲ್, ಶ್ರೀಧರ್ ಪೂಜಾರಿ, ದಯಾನಂದ ಕುಮಾರ್, ಗಣೇಶ್ ಸನಿಲ್ ಹಾಗೂ ಮೋಲಿ ಫೆರ್ನಾಂಡಿಸ್ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯ ಕನಕದಾಸ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸದಸ್ಯರಾದ ಫಾತಿಮತುಲ್ ಜೋಹರ ಮಾತನಾಡಿ ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಪಂಜಿಮೊಗರು ಶಾಖೆಯು ಒಂಬತ್ತನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹದೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗದವರ ಕಾರ್ಯವೈಖರಿ, ಗ್ರಾಹಕರ ಸಹಕಾರದೊಂದಿಗೆ ಪ್ರತಿವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ ೧೮೨ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲ ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ ೧೫೩ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲ ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವುದರಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ, ಸೇವೆ ನೀಡುತ್ತಿದ್ದೇವೆ. ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟಾಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಶಾಖೆಯ ಸಿಬ್ಬಂದಿ ವಿದ್ಯಾಶ್ರೀ ಸ್ವಾಗತಿಸಿ, ಗೌತಮಿ ವಂದಿಸಿದರು. ಪ್ರಭಾರ ಶಾಖಾಧಿಕಾರಿ ಮಾಧವಿ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




