Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಕನಕದಾಸ ಜಯಂತಿ ಆಚರಣೆ
    News

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಕನಕದಾಸ ಜಯಂತಿ ಆಚರಣೆ

    adminBy adminNovember 14, 2025

    ಮೈಸೂರು: ಮೈಸೂರಿನ ಗಾಂಧಿ ಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಮ್ಮುಖದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸರ ಜಯಂತಿ ಆಚರಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕನ್ನಡ ತಾಯಿ ಭುವನೇಶ್ವರಿ ಹಾಗೂ ಕನಕದಾಸರ ಭಾವಚಿತ್ರಗಳನ್ನು ಇಟ್ಟು ಪುಷ್ಪನಮನ ಸಲ್ಲಿಸುವ ಮೂಲಕ ಬ್ಯಾಂಕ್ ವತಿಯಿಂದ ಸರಳವಾಗಿ ಈ ಎರಡು ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಅಧ್ಯಕ್ಷರಾದ ಯೋಗೇಶ್ ಮಾತನಾಡಿ, ನಮ್ಮ ಬ್ಯಾಂಕ್‌ನಲ್ಲಿ ಮಹನೀಯರ ಜಯಂತಿಯನ್ನು ಪ್ರತಿವರ್ಷವೂ ಆಚರಿಸುತ್ತ ಬರುತ್ತಿದ್ದು, ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸ ಜಯಂತಿ ಈ ಎರಡು ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿ ನಿರ್ದೇಶಕರು ಪದಾಧಿಕಾರಿಗಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಿದ್ದೇವೆ ಎಂದು ಹೇಳಿದರು. ನಿರ್ದೇಶಕರಾದ ಎಂ.ರಾಮಕೃಷ್ಣ ಅವರು ನಮ್ಮ ಬ್ಯಾಂಕಿನಲ್ಲಿ ಪ್ರತಿವರ್ಷವೂ ಎಲ್ಲರ ಜಯಂತಿಯನ್ನು ಆಚರಿಸುವುದು ವಾಡಿಕೆ. ಅದರಂತೆ ದಾಸ ಶ್ರೇಷ್ಠ ಕನಕದಾಸರ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದು ಹೇಳಿದರು. ನಿರ್ದೇಶಕರಾದ ಎಸ್.ಬಿ.ಎಂ ಮಂಜು ಅವರು ಕುಲಕುಲವೆಂದು ಹೊಡೆದಾಡದಿರಿ ಎಂದು ಆಗಿನ ಕಾಲದಲ್ಲಿ ಜನಸಾಮಾನ್ಯರ ಧ್ವನಿಯಾಗಿದ್ದ ಕನಕದಾಸರ ಜಯಂತಿಯನ್ನು ಹಾಗೂ ನವೆಂಬರ್ ತಿಂಗಳಲ್ಲಿ ಮಾತ್ರ ರಾಜ್ಯೋತ್ಸವವನ್ನು ಆಚರಿಸದೆ ಪ್ರತಿದಿನವೂ ನಮ್ಮಲ್ಲಿ ಕನ್ನಡತನ ಬೆಳೆಸಿಕೊಂಡು ಆ ಮೂಲಕ ಕನ್ನಡಕ್ಕೆ ನಾವು ಗೌರವ ಸಲ್ಲಿಸಬೇಕು ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಟಿ.ರವಿ, ನಿರ್ದೇಶಕರಾದ ಎನ್ ಯೋಗಾನಂದ್, ರವಿಕುಮಾರ್, ಆರ್ ಸೋಮಣ್ಣ, ಹೆಚ್ ಹರೀಶ್ ಕುಮಾರ್, ವೈ ವಿಕಾಶ್, ಎ.ಮಂಚಪ್ಪ, ಪಡುವಾರಹಳ್ಳಿಯ ಎಂ ರಾಮಕೃಷ್ಣ , ವಸಂತ ಮುನೀಷ್, ಕಾರ್ಯದರ್ಶಿ ಕೆ ಹರ್ಷಿತ್ ಗೌಡ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Kanakadasa Jayanthi Kannada Rajyotsava The Mysore Co Operative Bank
    Previous Articleಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯಿಂದ ಸ್ತುತ್ಯರ್ಹ ಸೇವೆ: ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್
    Next Article ನ.17ರಂದು ಮಂಗಳೂರಿನ ಅಂಬೇಡ್ಕರ್‌ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.