Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಕ್ಷೇತ್ರಕ್ಕೆ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಅನೇಕ ಕೊಡುಗೆ
    News

    ಸಹಕಾರ ಕ್ಷೇತ್ರಕ್ಕೆ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಅನೇಕ ಕೊಡುಗೆ

    adminBy adminNovember 14, 2025

    ಮಡಂತ್ಯಾರಿನಲ್ಲಿ ಜಿಲ್ಲಾಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿಕೆ

    ಬೆಳ್ತಂಗಡಿ: ಕರಾವಳಿ ಭಾಗದ ಸಹಕಾರಿ ಪಿತಾಮಹ ಎನಿಸಿಕೊಂಡ ಮೊಳಹಳ್ಳಿ ಶಿವರಾಯರಿಂದ ಬೆಳೆದುಬಂದ ಸಹಕಾರ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಈ ಕ್ಷೇತ್ರಕ್ಕೆ ಮೆರುಗನ್ನು ನೀಡುತ್ತಿದ್ದಾರೆ. ಒಂದು ಕಾಲದಲ್ಲಿ ಸೂರಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಅನೇಕ ಸಹಕಾರಿ ಸಂಘಗಳ ಸಹಿತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 170ರಷ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇಂದು ಸುಸಜ್ಜಿತ ವ್ಯವಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸುವಂತಾಗಲು ಡಾ.ರಾಜೇಂದ್ರ ಕುಮಾರ್ ಅವರ ಕೊಡುಗೆ ಸಾಕಷ್ಟಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯಪಟ್ಟರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆಯ ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಧಿಕಾರಿಗಳ, ಆಡಳಿತ ಮಂಡಳಿಯ ಸೇವೆಯು ಸಹಕಾರಿ ಸಂಘದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
    ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಥಿಕ ಭದ್ರತೆ ಮೂಡಿಸುವುದರ ಜತೆಗೆ ಸಹಕಾರಿ ತತ್ವವನ್ನು ಪಾಲಿಸಿಕೊಂಡು ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರವು ಇಂದು ದೇಶಕ್ಕೆ ಮಾದರಿಯಾಗಿ ಬೆಳೆದಿದೆ. ಇಲ್ಲಿನ ಸಹಕಾರಿ ಸಂಘಗಳು ಬಾನೆತ್ತರಕ್ಕೆ ಬೆಳೆದು ನಿಲ್ಲಲು ಕಾರಣ ಅವುಗಳ ಸದಸ್ಯರು ಶ್ಲಾಘಿಸಿದರು. ಹಿರಿಯರ ಮಾರ್ಗದರ್ಶನ, ತ್ಯಾಗದ ಫಲದಿಂದ ಇಲ್ಲಿನ ಸಹಕಾರಿ ಸಂಘಗಳು ಬೆಳೆದು ನಿಂತಿವೆ. ಇಂದಿನ ದಿನಗಳಲ್ಲಿ ಯುವಜನರು ಸಹಕಾರಿ ರಂಗದತ್ತ ಆಕರ್ಷಿತರಾಗುತ್ತಿರುವುದು ಶ್ಲಾಘನೀಯ. ದೇಶದ ಅತ್ಯಂತ ಶಕ್ತಿಶಾಲಿಯಾದ ಸಹಕಾರಿ ರಂಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಬಲ ತುಂಬುವ ಜತೆ ಕೃಷಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದರು.
    ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜೋಯೆಲ್ ಮೆಂಡೋನ್ಸಾ ಮಾತನಾಡಿ ಸಹಕಾರಿ ರಂಗವು ಸ್ವಉದ್ಯೋಗ ಕೃಷಿ ಅಭಿವೃದ್ಧಿಯೊಂದಿಗೆ ದೇಶವನ್ನು ಬೆಳೆಸುತ್ತಿದೆ ಎಂದರು.

    ಸಹಕಾರಿ, ಕೃಷಿ, ಹೈನುಗಾರಿಕೆಯಲ್ಲಿ ಸಾಧನೆ ಮಾಡಿದ 179 ಮಂದಿಯನ್ನು ಸನ್ಮಾನಿಸಲಾಯಿತು. ಮಡಂತ್ಯಾರು ಪೇಟೆಯಿಂದ ಸಹಕಾರಿ ಜಾಥಾ ಜರಗಿತು. ಪುರಾತನ ಕೃಷಿ ಸಾಮಗ್ರಿ, ಆಧುನಿಕ ಕೃಷಿ ಸಾಮಗ್ರಿ ಸಹಿತ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಿಚಾರ ಮಂಡನೆಯನ್ನು ಮೂಡುಬಿದಿರೆ ಧವಳಾ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಸಂತೋಷ ಶೆಟ್ಟಿ ನಡೆಸಿಕೊಟ್ಟರು. ಸಹಕಾರಿ ಕ್ಷೇತ್ರಕ್ಕೆ ಒಬ್ಬ ಎಂಎಲ್ ಸಿಯನ್ನು ಆಯ್ಕೆ ಮಾಡಲು ಅವಕಾಶ ನೀಡಬೇಕೆಂದು ಮುಂಡಾಜೆ ಪ್ಯಾಕ್ಸ್ ವತಿಯಿಂದ ಸಹಕಾರಿ ಸಚಿವರಿಗೆ, ಸಂಸದರಿಗೆ, ಶಾಸಕರಿಗೆ ಹಾಗೂ ಸಹಕಾರಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.
    ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಪಿ.ಕುಶಾಲಪ್ಪ ಗೌಡ, ಜಿಲ್ಲಾ ಹಾಲು ಒಕ್ಕೂಟದ ಪ್ರಭಾಕರ ಆರಂಬೋಡಿ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಎಸ್.ಎಂ.ರಘು, ಸಿಡಿಒ ಪ್ರತಿಮಾ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾಪಂ ಅಧ್ಯಕ್ಷೆ ರೂಪಾ ನವೀನ್, ಮಡಂತ್ಯಾರು ಚರ್ಚಿನ ಧರ್ಮಗುರು ಡಾ.ಸ್ಟ್ಯಾನಿ ಗೋವಿಯಸ್, ಕೆಮ್ಮಾಜೆ ಮಸೀದಿ ಅಧ್ಯಕ್ಷ ಎ.ಪಿ.ಅಶ್ರಫ್ ಮುಸ್ಲಿಯಾರ್, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ, ತಾಲೂಕಿನ 24 ಫ್ಯಾಕ್ಸ್ ಗಳ ಅಧ್ಯಕ್ಷರು, ಮಡಂತ್ಯಾರು ಪ್ಯಾಕ್ಸ್ ಸಿಇಒ ಜೋಕಿಂ ಡಿಸೋಜ ಉಪಸ್ಥಿತರಿದ್ದರು.
    ಎಸ್ ಕೆ ಡಿ ಆರ್ ಡಿ ಪಿಯ ಕೃಷಿ ಅಧಿಕಾರಿ ಅಬ್ರಹಾಂ ಸಹಕಾರಿ ಜಾಥಾಕ್ಕೆ ಚಾಲನೆ ನೀಡಿದರು.
    ಶಿಕ್ಷಕ ಧರಣೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಹಕಾರಿ ಯೂನಿಯನ್ ಸಿಇಒ ಎಸ್.ವಿ. ಹಿರೇಮಠ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Akhila Bharatha Sahakara Sapthaha Dakshina Kannada Jilla Sahakari Union Harish Poonja Madantyaru krushi pattina sahakara sangha Shashikumar Rai balyottu
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ
    Next Article ಪರಸ್ಪರ ಸಹಕಾರದಿಂದಲೇ ದ.ಕ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗದ ಸ್ಥಿತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.