Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಜ್ಪೆ, ಕೋಟ, ಬಡಗಬೆಟ್ಟು ಸೊಸೈಟಿಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ
    News

    ಬಜ್ಪೆ, ಕೋಟ, ಬಡಗಬೆಟ್ಟು ಸೊಸೈಟಿಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ

    adminBy adminNovember 15, 2025

    ಐದು ಗ್ರಾಂ ಚಿನ್ನದ ಪದಕ, 10,000 ರೂ. ನಗದು, ಪಾರಿತೋಷಕ ನಾಳೆ ಮಂಗಳೂರಿನಲ್ಲಿ ಪ್ರದಾನ

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ನೀಡಲಾಗುವ ಸಹಕಾರ ಮಾಣಿಕ್ಯ ಪುರಸ್ಕಾರಕ್ಕೆ ಮಂಗಳೂರಿನ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆಯ ಕೋಟ ಸಹಕಾರಿ ವ್ಯವಸಾಯಿಕ ಸಂಘ ಹಾಗೂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಲಯದಿಂದ ಉಡುಪಿ ಜಿಲ್ಲೆಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗಳು ಆಯ್ಕೆಯಾಗಿವೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪುರಸ್ಕಾರಗಳನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯು 5 ಗ್ರಾಂ ಚಿನ್ನದ ಪದಕ, 10,000 ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ.
    ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಉತ್ತಮ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ದ.ಕ.ಜಿಲ್ಲೆಯಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆಯಿಂದ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ, ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪಿರ್ಕ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ, ಉಡುಪಿ ಜಿಲ್ಲೆಯಿಂದ ಕಾಪು ಕ್ಷೇತ್ರ ಸ್ತ್ರೀಶಕ್ತಿ ಸ್ವಸಹಾಯ ಗುಂಪು ವಿವಿಧೋದ್ದೇಶ ಸಹಕಾರಿ ಸಂಘ, ಉತ್ತಮ ಮೀನುಗಾರಿಕಾ ಸಹಕಾರಿ ಸಂಘ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಉಳ್ಳಾಲ ಮೀನುಗಾರರ ಮಹಿಳಾ ಸೇವಾ ಸಹಕಾರಿ ಸಂಘ ಉಳ್ಳಾಲ, ಉಡುಪಿ ಜಿಲ್ಲೆಯಿಂದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಆಯ್ಕೆಗೊಂಡಿದೆ.
    ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಹಾಗೂ ಪ್ರಿಯದರ್ಶಿನಿ ಸಹಕಾರ ಸಂಘ ಹಳೆಯಂಗಡಿ, ಉಡುಪಿ ಜಿಲ್ಲೆಯಿಂದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ‘ಸೊಸೈಟಿ ಕುಂದಾಪುರ ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪೆರ್ಡೂರು – ಉಡುಪಿ, ಉತ್ತಮ ಆಡಳಿತಾತ್ಮಕ ಸಹಕಾರ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘ ಮಂಗಳೂರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು, ಉಡುಪಿ ಜಿಲ್ಲೆಯಿಂದ ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘ ಕುಂದಾಪುರ ಆಯ್ಕೆಗೊಂಡಿದೆ.
    ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿಗೆ ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘ, ಉತ್ತಮ ಟಿ.ಎ.ಪಿ.ಸಿ.ಎಂ.ಎಸ್ ಪ್ರಶಸ್ತೀಗೆ ಟಿ.ಎ.ಪಿ.ಸಿ.ಎಂ.ಎಸ್ ಮಂಗಳೂರು ಆಯ್ಕೆಯಾಗಿದೆ.
    ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ-ವಿಶೇಷ ಪ್ರಶಸ್ತಿಗೆ ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು, ಸುವರ್ಣ ಮಹೋತ್ಸವ ಪೂರೈಸಿದ ಸಹಕಾರಿ ಸಂಘ – ವಿಶೇಷ ಪ್ರಶಸ್ತಿ: ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿ, ಮಂಗಳೂರು, ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ -ಬೆಳ್ತಂಗಡಿ ತಾಲೂಕು, ಉಡುಪಿ ಜಿಲ್ಲೆಯಿಂದ ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘ ನಿ. -ಕುಂದಾಪುರ ಆಯ್ಕೆಗೊಂಡಿದೆ.
    ಉತ್ತಮ ನವೋದಯ ಸ್ವಸಹಾಯ ಗುಂಪು ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಖ್ಯಪ್ರಾಣ ನವೋದಯ ಸ್ವಸಹಾಯ ಗುಂಪು ಮಂಗಳೂರು, ಉಡುಪಿ ಜಿಲ್ಲೆಯಿಂದ ನಿಕೇತ ನವೋದಯ ಸ್ವಸಹಾಯ ಗುಂಪು- ಬಜಗೋಳಿ -ಕಾರ್ಕಳ ಆಯ್ಕೆಗೊಂಡಿದೆ. ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದ ಮೊದಲ ರ್ಯಾಂಕ್ ವಿಜೇತರಾದ ಚೇತನಾ ಬಿ.ಎಸ್. ಹಾಗೂ ಪ್ರತೀಕ್ಷಾ ಬಲ್ಪoತಿ ಮತ್ತು ಪತ್ರಿಕಾ ರಂಗದ ಪ್ರಶಸ್ತಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಇವರಿಗೆ ನೀಡಲಾಗುವುದು ಎಂದು ಡಾ|ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Akhila Bharatha Sahakara Sapthaha Dr. M.N Rajendrakumar karavali Utsava Maidana Sahakara Manikya award
    Previous Articleಪರಸ್ಪರ ಸಹಕಾರದಿಂದಲೇ ದ.ಕ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗದ ಸ್ಥಿತಿ
    Next Article ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸೌಹಾರ್ದ ಸಂಘ ಪುರಸ್ಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.