ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ನ.17ರಂದು ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯಲಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. 10.15ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ.ವೇದವ್ಯಾಸ ಕಾಮತ್, ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ, ಭಾರತಿ ಜಿ.ಭಟ್, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್.ಎನ್ ರಮೇಶ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ಎಂಬ ವಿಷಯದಲ್ಲಿ ಸಹಕಾರ ತರಬೇತಿ ಕೇಂದ್ರ ಮೂಡುಬಿದಿರೆ ಇಲ್ಲಿಯ ಉಪನ್ಯಾಸಕರಾದ ಬಿಂದು ನಾಯರ್ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

