Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ
    News

    ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ

    adminBy adminNovember 16, 2025

    ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಜಯರಾಮ ಪ್ರಭು ಅಭಿಪ್ರಾಯ

    ಕಾರ್ಕಳ: ಪರಿಸರವನ್ನು ಸಂರಕ್ಷಣೆ ಮಾಡಿ ಸ್ವಚ್ಛ ಸುಂದರ ಪರಿಸರ ನಿರ್ಮಾಣದ ಜವಾಬ್ಧಾರಿ ಪ್ರತಿಯೋರ್ವ ನಾಗರಿಕನ ಆದ್ಯ ಕರ್ತವ್ಯವಾಗಬೇಕು ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಜಯರಾಮ ಪ್ರಭು ಹೇಳಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅವರು ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ“ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.
    ರೋಟರಿ ಕ್ಲಬ್ ಅಧ್ಯಕ್ಷರಾದ ಕೆ.ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.


    ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಭರತ್ ನಿಡ್ಪಳ್ಳಿ ಮತ್ತು ಬಿಜು ಜಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ಅಧ್ಯಕ್ಷರಾದ ಗೋಪಾಲ್ ಅಂಚನ್, ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ರಮೇಶ್ ಹಾಗೂ ಸದಸ್ಯರು, ರೋಟರಿ ಕ್ಲಬ್ ಕಾರ್ಕಳ ಇದರ ಕಾರ್ಯದರ್ಶಿ ಚೇತನ್ ನಾಯಕ್ ಇದರ ಸದಸ್ಯರು, ಕಾರ್ಕಳ ಪುರಸಭಾ ಸದಸ್ಯರು ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿ ಕಾರ್ಕಳ ಇದರ ಅಧ್ಯಕ್ಷರಾದ ನಳಿನಿ ವಿಜೇಂದ್ರ, ಸ್ವಚ್ಛ ಕಾರ್ಕಳದ ಸಂಯೋಜಕರಾದ ಫೆಲಿಕ್ಸ್ ಜೋಸೆಫ್ ಮತ್ತು ಸದಸ್ಯರು, ಪ್ರಾಧ್ಯಾಪಕರಾದ ಶಂಕರ್ ಕುಡ್ವ, ಪ್ರದರ್ಶ ಅವರ ನೇತೃತ್ವದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟಿಯ ಸೇವಾ ಯೋಜನೆ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶ್ರೀಮದ್ ಭುವನೇಂದ್ರ ಹೈಸ್ಕೂಲ್ ಇದರ ಮುಖ್ಯ ಉಪಾಧ್ಯಾಯರಾದ ಆರ್ ನಾರಾಯಣ ಶೆಣೈ, ವೆಂಕಟರಮಣ ಮಹಿಳಾ ಕಾಲೇಜಿನ ಗೀತಾ ಜಿ, ಧಾರ್ಮಿಕ ಕಾರ್ಯಕರ್ತರಾದ ಹರೀಶ್ ಆಚಾರ್ಯ ಹಾಗೂ ಸತೀಶ್ ಆಚಾರ್ಯ, ಕಾರ್ಕಳ ಟೈಗರ್ಸ್ ಇದರ ಸದಸ್ಯರು, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ ನೀರೇಬೈಲೂರು, ಹಾಗೂ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ ನಿಂಜೂರು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು, ಮಾಧ್ಯಮ ಮಿತ್ರರು, ಬ್ಯಾಂಕಿನ ಸದಸ್ಯರು, ಸಿಬ್ಬಂದಿಗಳು ಹಾಗೂ ಹಿತೈಷಿಗಳು ಸ್ವಯಂ ಸೇವಕರಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
    ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನ ರಸ್ತೆಯಿಂದ ಮಾರ್ಕೆಟ್ ಮೂಲಕ ಕಾರ್ಕಳ ಬಸ್ ನಿಲ್ದಾಣದವರೆಗಿನ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಶ್ರಮದಾನ ಕಾರ್ಯ ನಡೆಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    K.Jayaram Prabhu Karkala Shree Venkataramana Temple Shree Bhuvanendra College Swacch Bharath Swacchatha Hi Seva Vishwakarma Sahakara Bank Limited
    Previous Articleಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರಿಂದ ಕ್ರಾಂತಿಕಾರಿ ಬದಲಾವಣೆ
    Next Article ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ ಪ್ರದಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.