ಗಂಗೊಳ್ಳಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರ ಇಲಾಖೆಗಳ ಆಶ್ರಯದಲ್ಲಿ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗೂ ಮಂಗಳೂರು ದಕ್ಷಿಣ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಿ.ವೆಂಕಟೇಶ್ ಭಾಸ್ಕರ್ ಶೆಣೈಯವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಗಣೇಶ್ ನಾಯಕ್, ನಿರ್ದೇಶಕರಾದ ಕೆ.ಗೋಪಾಲಕೃಷ್ಣ ನಾಯಕ್, ಬಿ.ರಾಘವೇಂದ್ರ ಪೈ ಹಾಗೂ ಗೀತಾ ನಾಯಕ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ ಕುಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

105 ವರ್ಷಗಳ ಇತಿಹಾಸ ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘವು 100 ಕೋಟಿ ಠೇವಣಿ ಹೊಂದಿದ ಉಡುಪಿ ಜಿಲ್ಲೆಯ ಮೊದಲ ಸೌಹಾರ್ದ ಸಹಕಾರಿ ಸಂಘವೆಂಬ ದಾಖಲೆ ಮಾಡಿದೆ. 85 ಕೋಟಿ ಸದಸ್ಯರ ಸಾಲ, 7 ಕೋಟಿ ಮೀಸಲು ನಿಧಿ, 30 ಕೋಟಿ ಹೂಡಿಕೆ ಹಾಗೂ 3 ಕೋಟಿ ಪಾಲು ಬಂಡವಾಳ ಹೊಂದಿರುವ ಸಂಘವು ಸತತ 4 ವರ್ಷಗಳಿಂದ 1 ಕೋಟಿಗೂ ಅಧಿಕ ಲಾಭ ಗಳಿಸುತ್ತಿದೆ. ಸಂಘವು ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸಾರ್ವಜನಿಕರಿಗೆ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಕುಂದಾಪುರ ತಾಲೂಕಿನ ಪರಿಸರದ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು 8% ಬಡ್ದಿ ದರದಲ್ಲಿ ಚಿನ್ನಾಭರಣ ಸಾಲ ನೀಡಿದ ಜಿಲ್ಲೆಯ ಪ್ರಥಮ ಸಹಕಾರಿ ಸಂಘವಾಗಿರುತ್ತದೆ.
2004ರಲ್ಲಿ ಸಂಸ್ಥೆಗೆ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಸ್ಥೆ ಪ್ರಶಸ್ತಿ ಲಭಿಸಿದ್ದು ,ಅಂದಿನ ಅಧ್ಯಕ್ಷರಾಗಿದ್ದ ಎಚ್.ಗಣೇಶ್ ಕಾಮತ್‌ರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಅತ್ಯುತ್ತಮ “ಕಾರ್ಯದರ್ಶಿ” ಪ್ರಶಸ್ತಿ ದೊರಕಿರುವುದು ಸಂಸ್ಥೆಯ ಸಾಧನೆಗೆ ಹಿಡಿದ ಕನ್ನಡಿಯಾಗಿರುತ್ತದೆ.

